ಮಂಡ್ಯ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿಯಾದ ಬೆನ್ನಲ್ಲಿಯೇ ಬಿಜೆಪಿ ಹೈಕಮಾಂಡ್ ಸಂಸದೆ ಸುಮಲತಾ ಅವರಿಗೆ ಬುಲಾವ್ ನೀಡಿದೆ.
ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಕಾ ಆಗಿದ್ದು, ಮಂಡ್ಯ ಕ್ಷೇತ್ರದಿಂದ ಜೆಡಿಎಸ್‍ಗೆ ಬಿಜೆಪಿಯ ಟಿಕೆಟ್ ನೀಡುವುದು ಪಕ್ಕಾ ಆಗಿದೆ. ಹೀಗಾಗಿ ಮಂಡ್ಯದಲ್ಲಿ ಸ್ಪರ್ಧೆಗೆ ದಳಪತಿಗಳ ಸಿದ್ಧತೆ ನಡೆಸುತ್ತಿದ್ದಾರೆ. ಹೀಗಾಗಿಯೇ ಸುಮಲತಾ ಅವರಿಗೆ ಆಹ್ವಾನ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಸುಮಲತಾ ಅವರು ಮಧ್ಯಾಹ್ನವೇ ರಾಷ್ಟ್ರರಾಜಧಾನಿಗೆ ತೆರಳಿದ್ದಾರೆ. ಒಂದು ವೇಳೆ ಮಂಡ್ಯ ಟಿಕೆಟ್ ಕೈ ತಪ್ಪಿದ್ರೆ ಸುಮಲತಾ ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.