ಟೀಂ ಇಂಡಿಯಾ ಪ್ರವೇಶಿಸಲು ಯುವ ಪ್ರತಿಭೆಗಳಿಗೆ ಬಂಪರ್ ಚಾನ್ಸ್ Team India saaksha tv
ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಯುವ ಆಟಗಾರರು ಇನ್ನಿಲ್ಲದ ಕಸರತ್ತುಗಳನ್ನು ಮಾಡುತ್ತಿದ್ದಾರೆ. ದೇಶೀಯ ಟೂರ್ನಿಗಳಲ್ಲಿ ಮಿಂಚಿನ ಪ್ರದರ್ಶನ ನೀಡುತ್ತಿದ್ದಾರೆ.
ಐಪಿಎಲ್ನಲ್ಲೂ ತಾಕತ್ತು ಪ್ರದರ್ಶನ ಮಾಡುತ್ತಿದ್ದಾರೆ. ಆದರೆ ಟೀಮ್ ಇಂಡಿಯಾದಲ್ಲಿ ಹೆಚ್ಚುಕಮ್ಮಿ ಸ್ಥಾನ ಗಟ್ಟಿಯಾಗುವುದರಿಂದ ಹಲವು ಆಟಗಾರರಿಗೆ ಅವಕಾಶವೇ ಸಿಗುತ್ತಿಲ್ಲ.
ಕೆಲ ಸರಣಿಗಳಲ್ಲಿ ಆಟಗಾರರು ವಿಶ್ರಾಂತಿ ತೆಗೆದುಕೊಂಡಾಗ ಅಥವಾ ಗಾಯಗೊಂಡಾಗ ಮಾತ್ರ ಹೊಸ ಆಟಗಾರರಿಗೆ ಟೀಮ್ ಇಂಡಿಯಾದ ಬಾಗಿಲು ತೆರೆಯುತ್ತದೆ.
ಮುಂದಿನ ವರ್ಷ ಮಾರ್ಚ್ನಲ್ಲಿ ಅಫ್ಘಾನಿಸ್ತಾನ ತಂಡವು ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಈ ಎರಡೂ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.
ಈ ಸರಣಿಯಲ್ಲಿ ಭಾರತದ ಬಹುತೇಕ ಆಟಗಾರರಿಗೆ ಆಡುವ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಮಾರ್ಚ್ನಲ್ಲಿ ಈ ಸರಣಿ ನಡೆಯಲಿದ್ದು, ಹಿರಿಯ ಆಟಗಾರು ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.
ಹೀಗಾಗಿ ಹೊಸಬರಿಗೆ ತಂಡದಲ್ಲಿ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ.
ಟೀಮ್ ಇಂಡಿಯಾದಲ್ಲಿ ಅವಕಾಶಕ್ಕಾಗಿ ಕಾಯುತ್ತಿರುವ ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಸಂಜು ಸ್ಯಾಮ್ಸನ್ ರಂತಹ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾದಲ್ಲಿ ರುತುರಾಜ್ ಗಾಯಕ್ವಾಡ್ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಕಳೆದ ಐಪಿಎಲ್ ಹಾಗೂ ಸದ್ಯ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ರುತುರಾಜ್ ಮತ್ತು ಅಯ್ಯರ್ ಮಿಂಚಿನ ಆಟ ಆಡುತ್ತಿದ್ದಾರೆ.
ಒಟ್ಟಿನಲ್ಲಿ ಯುವ ಆಟಗಾರರ ಪ್ರದರ್ಶನ ಅನುಭವಿಗಳ ಸತ್ವ ಪರೀಕ್ಷೆ ಮಾಡುತ್ತಿದ್ದಾರೆ.