ಜಸ್ಪ್ರೀತ್ ಬುಮ್ರಾ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದ್ದಾರೆ. ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬುಮ್ರಾ ಅವರು ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ಗಳನ್ನು ಮತ್ತು ಎರಡನೇ ಇನಿಂಗ್ಸ್ನಲ್ಲಿ 3 ವಿಕೆಟ್ಗಳನ್ನು ಪಡೆದು ಒಟ್ಟು 9 ವಿಕೆಟ್ಗಳನ್ನು ಕಬಳಿಸಿದರು.
ಕಪಿಲ್ ದೇವ್ ದಾಖಲೆ ಮುರಿದ ಬುಮ್ರಾ..?
ಈ ಸಾಧನೆಯೊಂದಿಗೆ ಬುಮ್ರಾ ಅವರು ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.