Jasprit Bumrah : ಮೊದಲ 10 ಓವರ್ ಗಳಲ್ಲಿ ನಾಲ್ಕು ವಿಕೆಟ್ | ಬುಮ್ರಾ ದಾಖಲೆ
ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅಪರೂಪದ ದಾಖಲೆ ಬರೆದಿದ್ದಾರೆ.
ಬುಮ್ರಾ ಏಕದಿನ ಪಂದ್ಯದ ಮೊದಲ 10 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡರು.
ಬುಮ್ರಾ ಜೇಸನ್ ರಾಯ್ (0), ಬೈರಾ ಸ್ಟೋವ್ (7), ಜೋ ರೂಟ್ (0), ಲಿವಿಂಗ್‌ಸ್ಟೋನ್ (0) ರೂಪದಲ್ಲಿ ನಾಲ್ಕು ವಿಕೆಟ್ ಪಡೆದರು.
ಇದಕ್ಕೂ ಮುನ್ನ 2013ರಲ್ಲಿ ಶ್ರೀಲಂಕಾ ವಿರುದ್ಧ ಭುವನೇಶ್ವರ್ ಕುಮಾರ್ ಹಾಗೂ 2003ರಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ಶ್ರೀಲಂಕಾ ವಿರುದ್ಧ ಜಗ್ವಾಲ್ ಶ್ರೀನಾಥ್ ಮೊದಲ ಹತ್ತು ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಬಳಿಸಿದ್ದರು.

ಇನ್ನು ಟೀಂ ಇಂಡಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅತಿ ಕಡಿಮೆ ಸ್ಕೋರ್‌ಗೆ ಐದು ವಿಕೆಟ್ ಕಳೆದುಕೊಂಡ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಬೇಡವಾದ ದಾಖಲೆ ಮಾಡಿದೆ.
ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ 26 ರನ್ ಗಳಿಗೆ ಐದು ವಿಕೆಟ್ ಕಳೆದುಕೊಂಡಿತ್ತು.
ಇದಕ್ಕೂ ಮುನ್ನ 1997ರಲ್ಲಿ ಪಾಕಿಸ್ತಾನ 29 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿದ್ದರೆ, 2005ರಲ್ಲಿ ಜಿಂಬಾಬ್ವೆ 30 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿತ್ತು.
1997ರಲ್ಲಿ ವೆಸ್ಟ್ ಇಂಡೀಸ್ 32 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿತ್ತು.