ಮನೆಯ ಬೀಗ ಮುರಿದು ಮನೆ ಕಳ್ಳತನ ಮಾಡಿ ಅಪಾರ ಪ್ರಮಾಣದ ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ.
ಈ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಎಂ.ಸೂಗುರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಾಗಿ ವೀರೇಶ್ ಎಂಬುವವರ ಮನೆಯಲ್ಲಿಯೇ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬೀಗ ಮುರಿದು ಲಾಕರ್ನಲ್ಲಿದ್ದ 190 ಗ್ರಾಂ ಚಿನ್ನಾಭರಣ, ಕೆಜಿಗಟ್ಟಲೆ ಬೆಳ್ಳಿ, 4.80 ಲಕ್ಷ ರೂ. ನಗದು ದೋಚಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.