ತುಮಕೂರು: ತಾಲೂಕಿನ ಕುಚ್ಚಂಗಿ ಕೆರೆಯ ಹತ್ತಿರ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದೆ.
ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಸಾವನ್ನಪ್ಪಿದವರು ಎನ್ನಲಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿತ್ತು. ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ಎಸ್ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.