ರಾಯಚೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಲಿಂಗಸುಗೂರು (Lingasaguu Taluku) ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ನಡೆದಿದೆ. ಹಟ್ಟಿ ಚಿನ್ನದ ಗಣಿ ಕ್ಯಾಂಪಿನ ಗುಂಡುರಾವ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯನ್ನು ಮಂಜುಳಾ (45) ಎಂದು ಗುರುತಿಸಲಾಗಿದೆ. ಮಂಜುಳಾ ಅವರು, ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನೀಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮಂಜುಳಾ ಅವರನ್ನು ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಮಂಜುಳಾ ಮನೆಯಿಂದ ಸ್ವಲ್ಪ ದೂರದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ತನಿಖೆ ನಂತರ ಸಾವಿನ ಕುರಿತು ನಿಖರ ಮಾಹಿತಿ ಗೊತ್ತಾಗಲಿದೆ.