ಬಾಗಲಕೋಟೆ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಇಳಕಲ್ ತಾಲ್ಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶರಣಪ್ಪ ರಾಜೂರ ಎಂಬುವವರ ಹೊಲದ ಹತ್ತಿರ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ ಎನ್ನಲಾಗಿದೆ. ಮಹಿಳೆಯ ವಯಸ್ಸನ್ನು ಅಂದಾಜು 35 ರಿಂದ 40 ವರ್ಷ ಎನ್ನಲಾಗಿದೆ. ಮೊದಲು ಹೊಡೆದು ನಂತರ ಮೈಮೇಲೆ ಪೆಟ್ರೋಲ್ ಅಥವಾ ಸೀಮೆ ಎಣ್ಣೆ ಸುರಿದು ದುಷ್ಕರ್ಮಿಗಳು ಸುಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಮಹಿಳೆಯ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ.