Bus Accident | ಟ್ರಕ್ ಗೆ ಬಸ್ ಡಿಕ್ಕಿ ಹೊಡೆದು 15 ಮಂದಿ ಸಾವು
ಲಕ್ನೋ : ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದು 15 ಮಂದಿ ಕಾರ್ಮಿಕರು ಮೃತಪಟ್ಟು 40 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಉತ್ತರಪ್ರದೇಶದ ಮೂಲದವರಾಗಿದ್ದು, ದೀಪಾವಳಿ ಸಂಭ್ರಮಿಸಲು ಮನೆಗೆ ತೆರಳುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುಮಾರು 100 ಮಂದಿ ಪ್ರಯಾಣಿಸುತ್ತಿದ್ದ ಬಸ್ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ತೆರಳುತ್ತಿದ್ದರು.

ಆದ್ರೆ ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಸ್ಥಳದಲ್ಲಿಯೇ 15 ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ.
ಸದ್ಯ ಗಾಯಾಳುಗಳನ್ನು ರೇವಾದ ಸಂಜಯ್ ಗಾಂಧಿ ವೆಮೊರಿಯಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ರೇವಾ ಎಸ್ ಪಿ ನವನೀತ್ ಭಾಸಿನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.








