ಬಸ್ ಪಲ್ಟಿ | 9 ಸಾವು, 45 ಜನರಿಗೆ ಗಂಭೀರ ಗಾಯ
ಚಿತ್ತೂರು: ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ, ಬಸ್ ಪಲ್ಟಿಯಾಗಿ 1 ಮಗು ಸೇರಿ 8 ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿಯ ಬಕರಾಪೇಟ ಕಣುಮಾ ಎಂಬಲ್ಲಿ ನಡೆದಿದೆ.
ಮಾಲಿಶೆಟ್ಟಿ ವೆಂಗಪ್ಪ (60), ಮಾಲಿಶೆಟ್ಟಿ ಮುರಳಿ (45), ಕಾಂತಮ್ಮ (40), ಮಾಲಿಶೆಟ್ಟಿ ಗಣೇಶ್ (40), ಜೆ.ಯಶಸ್ವಿನಿ (8), ಚಾಲಕ ನಬಿ ರಸೂಲ್ ಮತ್ತು ಕ್ಲೀನರ್ ಮೃತ ದುರ್ದೈವಿಗಳು. ಘಟನೆಯಲ್ಲಿ 45 ಜನ ಗಾಯಗೊಂಡಿದ್ದಾರೆ. ಖಾಸಗಿ ಬಸ್ಸಿನಲ್ಲಿ ಸುಮಾರು 63 ಜನರು ಪ್ರಯಾಣಿಸುತ್ತಿದ್ದರು.
ಈ ಭೀಕರ ಅಪಘಾತಕ್ಕೆ ಚಾಲಕನ ಅತಿ ವೇಗದ ಚಾಲನೆಯೇ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ರಕ್ಷಣಾ ತಂಡಗಳುಯ ದೌಡಾಯಿಸಿದ್ದು, ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಮತ್ತು ಗಾಯಾಳುಗಳನ್ನು ನಾರಾವರಿಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ತಿರುಪತಿ ರುವಾ ಮತ್ತು ಸ್ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ನಡೆದಿದ್ದೇನು? ಅನಂತಪುರ ಜಿಲ್ಲೆಯ ಧರ್ಮಾವರಂನ ರಾಜೇಂದ್ರ ನಗರದ ವೇಣು ಅವರ ನಿಶ್ಚಿತಾರ್ಥ ಚಿತ್ತೂರು ಜಿಲ್ಲೆಯ ನಾರಾಯಣವನಂ ಮೂಲದ ಯುವತಿ ಜೊತೆ ನಿಶ್ಚಯವಾಗಿತ್ತು. ಭಾನುವಾರ ಬೆಳಗ್ಗೆ ತಿರುಚಾನೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವೇಣು (ವರ) ಕುಟುಂಬವು ಇತರೆ 63 ಮಂದಿಯೊಂದಿಗೆ ಖಾಸಗಿ ಬಸ್ನಲ್ಲಿ ಮಧ್ಯಾಹ್ನ 3.30 ಕ್ಕೆ ಧರ್ಮಾವರಂನಿಂದ ಹೊರಟಿದೆ.
ಚಾಲಕ ವೇಗವಾಗಿ ವಾಹನ ಚಲಾಯಿಸಿದ್ದರಿಂದ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ, ಸುಮಾರು 100 ಅಡಿಯ ಕಣಿವೆಗೆ ಉರುಳಿದೆ. ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕೆಲವರ ತಲೆಗೆ ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರಲ್ಲಿ 10ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ.