Bus Accident | ಕೋಲಾರದಲ್ಲಿ ಬಸ್ ಪಲ್ಟಿ – ಇಬ್ಬರು ಸಾವು
ಕೋಲಾರ : ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ 15ಕ್ಕೂ ಹೆಚ್ಚು ಮಂದಿ ಜನರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ನಡೆದಿದೆ.
ಆಂಧ್ರದ ವಿಜಯವಾಡದ ಷರೀಫ್ ಹಾಗೂ ಮೈಮುನ್ನಿಸಾ ಮೃತರಾಗಿದ್ದಾರೆ. ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಆಂದ್ರದ ಗುಂಟೂರಿನಿಂದ ಬೆಂಗಳೂರಿಗೆ ಬಸ್ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಪರಿಣಾಮ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕೂಡಲೇ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲು ಮಾಡಿದ್ದಾರೆ.








