ಸಾರಿಗೆ ನೌಕರರ ಮುಷ್ಕರ : ಹಳೇ ಮೈಸೂರು ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ
ಬೆಂಗಳೂರು : ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಇಂದಿನಿಂದ ಧರಣಿ ಆರಂಭಿಸಿದ್ದಾರೆ. ರಾಜ್ಯದಾದ್ಯಂತ ಧರಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆ ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ರಸ್ತೆಗೆ ಇಳಿದಿಲ್ಲ.
ಈ ಹಿನ್ನೆಲೆ ಪ್ರಯಾಣಿಕರಿಗಾಗಿ ಸಾಲುಗಟ್ಟಿ ಖಾಸಗಿ ಬಸ್ ಗಳು ನಿಂತಿದ್ದು, ದುಪ್ಪಟ್ಟು ದರ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ಆದ್ರೆ ಖಾಸಗಿ ಬಸ್ ಗಳಿಗೆ ಬೇಡಿಕೆ ಹೆಚ್ಚಾಗಿದೆ.
ಸಬ್‍ಅರ್ಬನ್ ಬಸ್ ನಿಲ್ದಾಣದ ಬಳಿ ಸಾಲುಗಟ್ಟಿ ಖಾಸಗಿ ಬಸ್‍ಗಳು ನಿಂತಿದ್ದು, ಬೆಂಗಳೂರು, ಹಾಸನ, ಮಡಿಕೇರಿಗೆ ತೆರಳುವ ಬಸ್ ಗಳಿಗೆ ಬೇಡಿಕೆ ಹೆಚ್ಚಿದೆ. ಬಸ್ ನಿಲ್ದಾಣದ ಬಳಿ ಬಿಗಿ ಪೆÇಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಇತ್ತ ಸಾರಿಗೆ ನೌಕರರ ಮುಷ್ಕರದ ಬಿಸಿ ಚಿನ್ನದನಾಡು ಕೋಲಾರ ಜಿಲ್ಲೆಗೂ ತಟ್ಟಿದೆ. ಇಂದು ಮುಂಜಾನೆಯಿಂದಲೇ ಬಸ್ ನಿಲ್ದಾಣಕ್ಕೆ ಒಂದೂ ಸಾರಿಗೆ ಬಸ್ ಬಾರದೆ ನಿಲ್ದಾಣದಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದೆ.
ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಸ್ ನಿಲ್ದಾಣ ಖಾಲಿ ಖಾಲಿಯಾಗಿದ್ದು, ಬಸ್ ನಿಲ್ದಾಣದ ಮುಂಭಾಗ ಖಾಸಗಿ ಬಸ್‍ಗಳ ದರ್ಬಾರು ಮುಂದುವರೆದಿದೆ. ಪ್ರಯಾಣಿಕರಿಗೆ ಮುಷ್ಕರದ ಬಿಸಿ ಮುಟ್ಟಿದೆ.
