ಚಿತ್ರದುರ್ಗ: ಆಟೋಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಚಿತ್ರದುರ್ಗ (Chitradurga) ತಾಲೂಕಿನ ರಾಮಜೋಗಿಹಳ್ಳಿ ಹತ್ತಿರ ನಡೆದಿದೆ. ಆಟೋದಲ್ಲಿದ್ದ ಅಪರಿಚತರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.