ಚಿತ್ರದುರ್ಗ: ಡಿವೈಡರ್ ಗೆ ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದವರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಈ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ (Challakere) ಪಟ್ಟಣದ ಬಳಿ ನಡೆದಿದೆ. ಮೊಳಕಾಲ್ಮೂರಿನಿಂದ (Molakalmuru) ಚಳ್ಳಕೆರೆಗೆ ಬರುತ್ತಿದ್ದ ಬಸ್ ಅತಿಯಾದ ವೇಗ ಹಾಗೂ ಚಾಲಕನ ಅಜಾಗರೂಕತೆಯಿಂದಾಗಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಆಗ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದ 10 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








