ಚಿಕ್ಕಮಗಳೂರು: ಕರ್ತವ್ಯ ನಿರತ ಸಾರಿಗೆ ಬಸ್ ಚಾಲಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ನಗರದಲ್ಲಿ ನಡೆದಿದ್ದು, ರವಿ ಲಮಾಣಿ (46) ಹೃದಯಾಘಾತಕ್ಕೆ ಬಲಿಯಾದ ಚಾಲಕ ಎನ್ನಲಾಗಿದೆ. ಮೂಡಿಗೆರೆ, ಗುತ್ತಿಹಳ್ಳಿ, ಹೆಸಗೋಡು ಗ್ರಾಮಕ್ಕೆ ಹೋಗುತ್ತಿದ್ದ ಸಂದರ್ಭ ದಾರಿ ಮಧ್ಯೆ ಚಾಲಕನಿಗೆ ಹೃದಯಾಘಾತವಾಗಿದೆ. ಚಾಲನೆ ಮಾಡುವ ಸಂದರ್ಭದಲ್ಲಿ ಎದೆನೋವು ಬಂದಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು, ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದ ನೌಕರ ಕೊಪ್ಪಳದ (Koppal) ಕೂಕನೂರು ಮೂಲದವರು ಎನ್ನಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದವರಿಗೆ ಏನೂ ಆಗಿಲ್ಲ ಎನ್ನಲಾಗಿದೆ.