ಬಸ್ ಗೆ ಬೆಂಕಿ : 12 ಮಂದಿ ಸಜೀವ ದಹನ

1 min read
rajasthan saaksha tv

ಬಸ್ ಗೆ ಬೆಂಕಿ : 12 ಮಂದಿ ಸಜೀವ ದಹನ rajasthan saaksha tv

ಜೈಪುರ್ : ಖಾಸಗಿ ಬಸ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ವಾರ್ಮರ್ ಜೋಧ್ ಪುರ್ ಹೆದ್ದಾರೆಯಲ್ಲಿ ನಡೆದಿದೆ.

ಟ್ಯಾಂಕರ್ ಚಾಲಕ ರಸ್ತೆಯ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿದ್ದೇ ಅಫಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಖಾಸಗಿ ಬಸ್ ಇಂದು ಬೆಳಿಗ್ಗೆ ಬಲೋತ್ರಾದಿಂದ ಹೊರಟಿತ್ತು. ಈ ವೇಳೆ ಎದುರಿಗೆ ಬಂದ ಟ್ಯಾಂಕರ್ ಬಸ್ ಗೆ ಡಿಕ್ಕಿ ಹೊಡೆದಿದೆ.

rajasthan saaksha tv

ಪರಿಣಾಮ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಬಸ್ ನಲ್ಲಿ ಹೊಗೆ ತುಂಬಿಕೊಂಡಿದ್ದು, ಜನರು ವಿಚಲಿತರಾಗಿ ಪ್ರಾಣ ಬಿಟ್ಟಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd