ಬ್ಯಾಂಕಾಕ್: ಮರಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ 14 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಥಾಯ್ಲೆಂಡ್ ನಲ್ಲಿ (Thailand) ಬಸ್ (Bus) ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಪಶ್ಚಿಮ ಪ್ರಾಂತ್ಯದ ಪ್ರಚುವಾಪ್ ಖಿರಿ ಖಾನ್‌ನಲ್ಲಿ ಮಧ್ಯರಾತ್ರಿ ಭೀಕರ ಅಪಘಾತ (Accident) ಸಂಭವಿಸಿದೆ. ಅಪಘಾತದ ಭೀಕರತೆಗೆ ಬಸ್ ಅರ್ಧಭಾಗದಷ್ಟು ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಪ್ರಯಾಣಿಕರನ್ನು ಹೊರ ತೆಗೆಯುವ ಕಾರ್ಯವನ್ನು ರಕ್ಷಣಾ ಸಿಬ್ಬಂದಿ ಮಾಡುತ್ತಿದ್ದಾರೆ.
ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ.