ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿಉರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿನ್ನೆ ಸಂಜೆ 7.45 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಓರ್ವ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿರುವುದು ಬಿಟ್ಟರೆ ಉಳಿದ 35 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದ ಹೂಟಗಳ್ಳಿಯ 35 ಜನರ ಗುಂಪು ಅಯ್ಯಪ್ಪ ದರ್ಶನಕ್ಕೆ ತೆರಳಿದ್ದರು. ನೆಲಕ್ಕಲ್ನಿಂದ ಪಂಪಾಗೆ ಕೇರಳ ಸರ್ಕಾರಿ ಬಸ್ನಲ್ಲಿ ತೆರಳುವಾಗ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟಯರ್ ಸ್ಫೋಟಗೊಂಡ ಹಿನ್ನೆಲೆ ಬಸ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇನ್ನ ಸ್ಥಳಕ್ಕೆ ಪೊಲೀಸರು ಆಗಮಿಸಿ ಅಯ್ಯಪ್ಪ ಭಕ್ತರನ್ನ ರಕ್ಷಣೆ ಮಾಡಿದ್ದಾರೆ. ಗಾಯಾಳು ಯುವಕನನ್ನ ಕೇರಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಬೆಂಕಿಯಲ್ಲಿ ಧಗಧಗಿಸಿದ ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.