ಬಸ್ ಪಾಸ್ ಅವಧಿ ವಿಸ್ತರಣೆ | ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ KSRTC saaksha tv
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪದವಿ, ಡಿಪ್ಲಮಾ, ಬಿಇಡಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.
ಅಕ್ಟೋಬರ್ ನಲ್ಲಿ ನಡೆಯಲಿರುವ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಈ ಬಾರಿಯ ಪರೀಕ್ಷಾ ಅವಧಿವರೆಗೆ ವಿಸ್ತರಿಸಿದೆ.
ಅಕ್ಟೋಬರ್ ನಲ್ಲಿ ಡಿಪ್ಲೂಮಾ, ಬಿಇಡಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ಕೆಎಸ್ ಆರ್ಟಿಸಿ ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ನವೆಂಬರ್ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.