“ಬಂದ್ ಯಶಸ್ವಿಗೆ ಸಾರಿಗೆ ನೌಕರರ ನೋವುಗಳೇ ಕಾರಣ”
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ಧಿಷ್ಠಾವದಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.
ರಾಜ್ಯದಾದ್ಯಂತ ಮುಷ್ಕರ ಯಶಸ್ವಿಯಾಗಿದ್ದು, ಈ ಬಗ್ಗೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗ ಜಾರಿ ಮಾಡುವವರೆಗೂ ಮುಷ್ಕರ ಮುಂದುವರೆಯಲಿದೆ.
ಬಂದ್ ಯಶಸ್ವಿಗೆ ಸಾರಿಗೆ ನೌಕರರ ನೋವುಗಳೇ ಕಾರಣ. ಹಲವು ದಿನಗಳಿಂದ ಅವರಿಗೆ ಸಾಕಷ್ಟು ಸಮಸ್ಯೆಗಳಿವೆ. ವ್ಯಕ್ತಿ ಪ್ರತಿಷ್ಠೆಗಿಂತ ನೌಕರರ ಸಮಸ್ಯೆ ಬಗೆಹರಿಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸಿಎಂ ಬಿಎಸ್ ವೈ ಶೇಕಡಾ ಎಂಟರಷ್ಟು ವೇತನ ಹೆಚ್ಚಳ ಮಾಡುವ ಭರಸವೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಚಂದ್ರಶೇಖರ್, ಸರ್ಕಾರ ಶೇ. 8 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಎಂದು ಹೇಳುತ್ತಿದೆ.
ಆದರೆ ಆರನೇ ವೇತನ ಆಯೋಗದ ಪ್ರಕಾರ ಸಾರಿಗೆ ನೌಕರರಿಗೆ ಶೇ. 36 ರಷ್ಟು ಸಂಬಳ ಹೆಚ್ಚಾಗಬೇಕು ಎಂದು ಹೇಳಿದರು.
