ಬೆಂಗಳೂರು : ಎಪಿಎಂಸಿ ಹಾಗೂ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ.
ಈ ಬಂದ್ ಗೆ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿವೆ.
ಇನ್ನು ನಾಳೆ ಬಸ್ ಸಂಚಾರ ಇರುತ್ತೋ ಇಲ್ವೋ ಎಂಬ ಪ್ರಶ್ನೆಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ಕೊಟ್ಟಿವೆ.
ಇಂತಹ ಕರ್ನಾಟಕ ಬಂದ್ ಗೆ ನಮ್ಮ ಸಾರಿಗೆ ಸಂಸ್ಥೆಯಿಂದ ಬೆಂಬಲವಿಲ್ಲ. ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇರಲಿದೆ.
ನಾಳಿನ ಕರ್ನಾಟಕ ಬಂದ್ ನಲ್ಲಿ ಸಾರಿಗೆ ಸಿಬ್ಬಂದಿಗಳು ಭಾಗವಹಿಸುತ್ತಿಲ್ಲ.
ನಾಳೆಯ ಕರ್ನಾಟಕ ಬಂದ್ ವಾಪಸ್ ಪಡೆಯುವಂತೆ ಬಿಎಸ್ ವೈ ಮನವಿ
ನಾಳೆ ನಡೆಯುತ್ತಿರುವ ರೈತರ ಪ್ರತಿಭಟನೆ ನಮ್ಮ ಬೆಂಬಲವಿಲ್ಲ.
ಸಾರಿಗೆ ಬಸ್ ಸಂಚಾರ, ಬೆಂಗಳೂರು ನಗರ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.








