ನಿಲ್ಲಿಸಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ ಗಳಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ನಿಲ್ಲಿಸಿಟ್ಟಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಖಾಲಿ ಜಾಗದಲ್ಲಿ ಹಳೆಯ ಬಸ್ ಗಳನ್ನು ನಿಲ್ಲಿಸಲಾಗಿತ್ತು. ಆದರೆ, ಶನಿವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹೊತ್ತಿಕೊಂಡು ಬಸ್ ಗಳು ಸುಟ್ಟು ಕರಕಲಾಗಿವೆ. ರಾಜಗೋಪಾಲ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.