ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Namma clinic: ಡಿಸೆಂಬರ್‌ 15 ರ ವೇಳೆಗೆ ರಾಜ್ಯದಲ್ಲಿ ನಮ್ಮ ಕ್ಲಿನಿಕ್‌ʼ ಕಾರ್ಯಾರಂಭ – ಡಾ.ಕೆ.ಸುಧಾಕರ್‌

ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼಗಳನ್ನು ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ 15 ರ ವೇಳೆಗೆ ಕಾರ್ಯಾರಂಭಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Naveen Kumar B C by Naveen Kumar B C
October 6, 2022
in Health, Newsbeat, ಆರೋಗ್ಯ
Namma clinic
Share on FacebookShare on TwitterShare on WhatsappShare on Telegram

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಡಿಸೆಂಬರ್‌ 15 ರ ವೇಳೆಗೆ ರಾಜ್ಯದಲ್ಲಿ ನಮ್ಮ ಕ್ಲಿನಿಕ್‌ʼ ಕಾರ್ಯಾರಂಭ – ಡಾ.ಕೆ.ಸುಧಾಕರ್‌

 

ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼಗಳನ್ನು ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ 15 ರ ವೇಳೆಗೆ ಕಾರ್ಯಾರಂಭಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ ಮಹಾಲಕ್ಷ್ಮಿಲೇಔಟ್‌ನ ವಾರ್ಡ್‌-58 ರ ಪಂಚಮುಖಿ ದೇವಸ್ಥಾನದ ಸಮೀಪ ʼನಮ್ಮ ಕ್ಲಿನಿಕ್‌ ಮಾದರಿ ರೂಪಿಸಿದ್ದು, ಇದನ್ನು ಸಚಿವರು ವೀಕ್ಷಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ಕ್ಲಿನಿಕ್‌ನಲ್ಲಿ ವೈದ್ಯ, ನರ್ಸಿಂಗ್‌ ಸಿಬ್ಬಂದಿ, ಲ್ಯಾಬ್‌ ಟೆಕ್ನೀಶಿಯನ್‌ ಹುದ್ದೆಗಳಿರುತ್ತವೆ. ಬಿಬಿಎಂಪಿ ವ್ಯಾಪ್ತಿಯ ಕ್ಲಿನಿಕ್‌ಗಳಿಗೆ ವೈದ್ಯರ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, 160 ವೈದ್ಯರು ಈಗಾಗಲೇ ನೇಮಕ ಆಗಿದ್ದಾರೆ. ಉಳಿದ ಎಲ್ಲಾ ಸಿಬ್ಬಂದಿ ಹುದ್ದೆ ತುಂಬಿದೆ. ಬಾಕಿ ಉಳಿದ 83 ಕ್ಕೆ ಮತ್ತೆ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ ಹತ್ತು ದಿನಗಳೊಳಗೆ ಇದು ಕೂಡ ಆಗಲಿದೆ ಎಂದರು.

ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಂತೆಯೇ ಇದು ಕಾರ್ಯ ನಿರ್ವಹಿಸಲಿದೆ. ಪ್ರತಿ ವಾರ್ಡ್‌ನಲ್ಲಿ ಒಂದು ಕ್ಲಿನಿಕ್‌ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಹೆಚ್ಚಲಿದೆ ಎಂದರು.

ಮಾರ್ಗಸೂಚಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಆದರೆ ನಗರ ಪ್ರದೇಶಗಳಲ್ಲಿ ಇದು ಕಡಿಮೆ ಇದೆ. ಆದ್ದರಿಂದಲೇ ಈ ಯೋಜನೆ ರೂಪಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಸಂಪೂರ್ಣ ಆರ್ಥಿಕ ಸಹಕಾರ ನೀಡಿದೆ. ಹೆಚ್ಚು ಜನರು ಬಂದು ಆರೋಗ್ಯ ತಪಾಸಣೆ, ಚಿಕಿತ್ಸೆಯ ಸೇವೆ ಪಡೆಯಬೇಕು. ಬಿಬಿಎಂಪಿಯಲ್ಲಿ ಈಗ 198 ವಾರ್ಡ್‌ಗಳಿವೆ. ಮುಂದೆ ವಾರ್ಡ್‌ಗಳ ಸಂಖ್ಯೆ ಹೆಚ್ಚಾಗಬಹುದು. ಇದಕ್ಕೆ ಪೂರಕವಾಗಿ ವಾರ್ಡ್‌ಗೆ ಒಂದರಂತೆ ಈಗಲೇ ಹೆಚ್ಚಿನ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಕಟ್ಟಡಗಳಲ್ಲಿ, ಬಾಡಿಗೆ ಕಟ್ಟಡಗಳಲ್ಲಿ 1,000-1,200 ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಕ್ಲಿನಿಕ್‌ ರೂಪಿಸಲಾಗುತ್ತಿದೆ. ಪ್ರತಿ ವರ್ಷ ಸಿಬ್ಬಂದಿಗಾಗಿ 138 ಕೋಟಿ ರೂ. ವೆಚ್ಚವಾಗಲಿದೆ. ನಾನ್‌ ರಿಕರಿಂಗ್‌ 17.52 ಕೋಟಿ ರೂ. ಸೇರಿ ಒಟ್ಟು 155 ಕೋಟಿ ರೂ. ವೆಚ್ಚವಾಗಲಿದೆ. ಯೋಗ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ ಮೊದಲಾದವುಗಳ ಕುರಿತು ಕ್ಲಿನಿಕ್‌ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.

 

ನಾಳೆ ಸಭೆ

 

ಕಳೆದ 16 ವರ್ಷದಿಂದ ಜಿವಿಕೆ ಸಂಸ್ಥೆ ಆಂಬ್ಯುಲೆನ್ಸ್‌ ಸೇವೆ ನೀಡುತ್ತಿದೆ. ಒಪ್ಪಂದದ ಪ್ರಕಾರ ಸಂಸ್ಥೆಯೇ ಸಿಬ್ಬಂದಿಗೆ ವೇತನ ನೀಡಬೇಕು. ಸರ್ಕಾರದಿಂದ ಹಣ ಪಾವತಿ ಮಾಡಲಾಗುತ್ತಿದೆ. ಸಿಬ್ಬಂದಿಗೆ ವೇತನ ನೀಡದಿದ್ದರೆ, ಸಂಸ್ಥೆಯವರು ಹಾಗೂ ಸಿಬ್ಬಂದಿ ಕಡೆಯವರನ್ನು ಕರೆಸಿ ನಾಳೆ ಸಭೆ ನಡೆಸಲಾಗುವುದು. ಈಗಾಗಲೇ ಅಧಿಕಾರಿಗಳು ಚರ್ಚೆ ಮಾಡಿದ್ದು, ಒಂದು ವಾರದಲ್ಲಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಲಾಗಿದೆ. ಈ ಸಮಸ್ಯೆಯಿಂದ ಜನರಿಗೆ ತೊಂದರೆಯಾಗಬಾರದು ಎಂದು ಹೇಳಲಾಗಿದೆ ಎಂದರು.

 

ಆಂಬ್ಯುಲೆನ್ಸ್‌ ಟೆಂಡರ್‌ ಅಂತಿಮಗೊಳ್ಳುತ್ತಿದ್ದು, ಎರಡು ತಿಂಗಳೊಳಗೆ ಮುಗಿಯಲಿದೆ. ಬಳಿಕ ಸೇವೆ ನೀಡುವವರು ಯಾರೆಂದು ತೀರ್ಮಾನವಾಗಲಿದೆ. ಹಳೆಯ ಸಂಸ್ಥೆಯಿಂದ 2008 ರಲ್ಲಿ ಸೇವೆ ಆರಂಭಿಸಿತ್ತು. ಆದರೆ ಈ ಸಂಸ್ಥೆಯಿಂದ ನಿರೀಕ್ಷಿತ ಸೇವೆ ದೊರೆಯತ್ತಿಲ್ಲ. ಅತ್ಯುತ್ತಮವಾದ ಆಂಬ್ಯುಲೆನ್ಸ್‌ ಸೇವೆ ನೀಡಲೆಂದೇ ಸರ್ಕಾರ ಹೊಸ ಯೋಜನೆ ರೂಪಿಸಿದೆ ಎಂದರು.

 

ಬೈಕ್‌ ಆಂಬ್ಯುಲೆನ್ಸ್‌ ಸಂಬಂಧ ರಚಿಸಿದ ಸಮಿತಿಗಳು, ಇದರ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದವು. ಆದ್ದರಿಂದ ಹೊಸ ಟೆಂಡರ್‌ನಲ್ಲಿ ಬೈಕ್‌ ಆಂಬ್ಯುಲೆನ್ಸ್‌ ಪ್ರಸ್ತಾಪ ಇಲ್ಲ. ಆದರೂ ಅಂಗಾಂಗ ದಾನದ ಸಂದರ್ಭ, ರೋಗಿಗಳ ವರ್ಗಾವಣೆಗೆ ಏರ್‌ ಆಂಬ್ಯುಲೆನ್ಸ್‌ ಪರಿಚಯಿಸಲು ಸರ್ಕಾರ ಉದ್ದೇಶಿಸಿದೆ. ಇನ್ನೂ ರೂಪರೇಷೆ ಅಂತಿಮವಾಗಿಲ್ಲ ಎಂದು ಮಾಹಿತಿ ನೀಡಿದರು.

 

ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಮಾಡುವ ಅಭಿಯಾನ ಮಾಡಲಾಗುತ್ತಿದೆ. 30 ವರ್ಷ ಮೇಲ್ಪಟ್ಟ ಎಲ್ಲರೂ ಆರೋಗ್ಯ ತಪಾಸಣೆ ಮಾಡಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಆಹಾರ ಸುರಕ್ಷತಾ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಿಮ್‌ಗಳಲ್ಲಿ ಬಳಸುವ ಪೌಡರ್‌ ಬಗ್ಗೆ ಮಾಹಿತಿ ಕಲೆಹಾಕಲು ಸೂಚಿಸಲಾಗಿದೆ. ಆಹಾರದಲ್ಲಿ ಗುಣಮಟ್ಟ ಇಲ್ಲದಿದ್ದರೆ, ಅನುಮತಿ ಇಲ್ಲದಿದ್ದರೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.

By December 15,  Namma clinic will be operational in the state – Dr. K. Sudhakar

Tags: Dr. K SudhakarNamma clinic
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram