ಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದೆ.
ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಅಧಿಸೂಚನೆ ಪ್ರಕಟಿಸಿದೆ.
ಜುಲೈ 10ರಂದು ಚುನಾವಣೆ ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಜೂನ್ 14 ನಾಮಪತ್ರ ಸಲ್ಲಿಸಲು ಕೊನೆಯ ದಿನ, ಜೂನ್ 21 ನಾಮಪತ್ರ ಪರಿಶೀಲನೆ, ಜೂನ್ 24 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.