ಬೈ ಎಲೆಕ್ಷನ್ : ಮೂರು ಕ್ಷೇತ್ರಗಳಲ್ಲಿ ಮತದಾನ ಆರಂಭ

1 min read
by-election

ಬೈ ಎಲೆಕ್ಷನ್ : ಮೂರು ಕ್ಷೇತ್ರಗಳಲ್ಲಿ ಮತದಾನ ಆರಂಭ

ಬೆಂಗಳೂರು : ಬೆಳಗಾವಿ ಲೋಕಸಭಾ ಉಪಚುನಾವಣೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಗೆ ಮತದಾನ ಆರಂಭವಾಗಿದೆ.

ಮುಂಜಾನೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು, ಜನ ಸರದಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ ಮಾಡುತ್ತಿದ್ದಾರೆ.

ಕೊರೊನಾ ಹಿನ್ನೆಲೆ ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ.

ಇನ್ನು ಮಸ್ಕಿ ಕ್ಷೇತ್ರದಲ್ಲಿ ಒಟ್ಟು 305 ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ. ಬಸವಕಲ್ಯಾಣದಲ್ಲಿ 326 ಮತಗಟ್ಟೆಗಳು ಸಜ್ಜಾಗಿವೆ.

by-election

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಒಟ್ಟು 2,566 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮಸ್ಕಿಯಲ್ಲಿ ಬಿಜೆಪಿಯ ಪ್ರತಾಪಗೌಡ ಪಾಟೀಲ್, ಕಾಂಗ್ರೆಸ್ ನ ಬಸನಗೌಡ ತುರವಿಹಾಳ ಮಧ್ಯೆ ಪೈಪೋಟಿ ಇದೆ.

ಬಸವ ಕಲ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್ ನ ಮಾಲಾ ಬಿ.ನಾರಾಯಣರಾವ್, ಬಿಜೆಪಿಯ ಶರಣು ಸಲಗಾರ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡದಲ್ಲಿ ಬಿಜೆಪಿಯ ಮಂಗಳಾ ಅಂಗಡಿ, ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಮಧ್ಯೆ ಫೈಟ್ ಜೋರಾಗಿದೆ.

lock

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd