“ಬೈ ಎಲೆಕ್ಷನ್ ಫಲಿತಾಂಶದಂದು ಸಂಭ್ರಮಾಚರಣೆ ಮಾಡಂಗಿಲ್ಲ”
ಉಡುಪಿ : ಇಂದು ಉಪಚುನಾವಣೆಗಳು ಫಲಿತಾಂಶ ಪ್ರಕಟವಾಗಲಿದ್ದು, ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಉಪಚುನಾವಣೆಯ ಫಲಿತಾಂಶ ಸಂದರ್ಭ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತೇವೆ.
ಹೀಗಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇಂದು ಬೆಳಗಾವಿ ಲೋಕಸಭಾ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಮತದಾನ ನಡೆದಿತ್ತು.