ಬೆಂಗಳೂರು : ಕುರುಬ ಸಮುದಾಯವನ್ನು ಎಸ್ ಟಿಗೆ ಸೇರಿಸುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕುರುಬ ಸಮುದಾಯವನ್ನು ಎಸ್ಟಿ ಗೆ ಸೇರಿಸುವ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರುಬ ಸಮುದಾಯವನ್ನು ಎಸ್ ಟಿಗೆ ಸೇರಿಸುವ ಬಗ್ಗೆ ಕೆಲ ಗೊಂದಲಗಳಿವೆ.
ಇದನ್ನು ಸಚಿವ ಈಶ್ವರಪ್ಪ ಸರಿಪಡಿಸಲಿ. ನಾನು ಈಶ್ವರಪ್ಪ ವೈಯುಕ್ತಿಕವಾಗಿ ಉತ್ತಮ ಸ್ನೇಹಿತರು, ಆದ್ರೆ ರಾಜಕೀಯ ಸಿದ್ಧಾಂತ ಮಾತ್ರ ಬೇರೆ ಬೇರೆ ಎಂದು ಹೇಳಿದರು.
ಇದನ್ನೂ ಓದಿ : ಅಧಿವೇಶನದ ಅವಧಿ ಕಡಿತಗೊಳಿಸಿದ್ದು ದುರಂತ : ಕಾಗೋಡು ತಿಮ್ಮಪ್ಪ
ಈ ವೇಳೆ ಶಿರಾ ಹಾಗೂ ರಾಜರಾಜೇಶ್ವರಿ ಉಪಚುನಾವಣೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಶಿರಾ ಹಾಗೂ ರಾಜರಾಜೇಶ್ವರಿ ನಗರಕ್ಕೆ ಈಗಾಗಲೇ ಚುನಾವಣೆ ದಿನಾಂಕ ನಿಗದಿಯಾಗಿದೆ.
ಎರಡೂ ಕ್ಷೇತ್ರಗಳಿಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳನ್ನು ಸ್ವತಂತ್ರವಾಗಿ ನಿಲ್ಲಿಸುವ ಆಲೋಚನೆಯನ್ನು ಮಾಡಿದ್ದೇವೆ. ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಶಿರಾದಿಂದ ಜಯಚಂದ್ರ ಅವರನ್ನು ಅಭ್ಯರ್ಥಿಯಾಗಿ ಮಾಡುದ್ದೇವೆ ಹಾಗೆಯೆ ಆರ್.ಆರ್.ನಗರಕ್ಕೂ ನಮ್ಮ ಅಭ್ಯರ್ಥಿಯನ್ನು ಹಾಕುತ್ತೇವೆ.
ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆಯಿಲ್ಲ ಒಂದೊಂದು ಕ್ಷೇತ್ರದಲ್ಲಿ ಎಂಟು ಮಂದಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.








