ಚನ್ನಪಟ್ಟಣ ಕ್ಷೇತ್ರ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭವಾಗಿದೆ.
ಫಲಿತಾಂಶ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಭಾನುವಾರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಸಂಡೂರು ಕ್ಷೇತ್ರದ ಮತ ಎಣಿಕೆ ಕೂಡ ಆರಂಭವಾಗಿದೆ.
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆದಿತ್ತು.








