ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದ್ದು, ಎಲ್ಲೆಡೆ ಮತದಾನ ಚುರುಕುಗೊಂಡಿದೆ.
ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿಗೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ (ByElection) ನಡೆಯುತ್ತಿದ್ದು, ಬೆಳಗ್ಗೆ 7ರಿಂದಲೇ ಮತದಾನ ಆರಂಭವಾಗಿದೆ. ಸಂಜೆ 5ರ ವರೆಗೂ ಮತದಾನ ನಡೆಯಲಿದೆ. ಜನರು ಉತ್ಸುಕರಾಗಿ ಮತದಾನ ಮಾಡುತ್ತಿದ್ದಾರೆ.
ಚನ್ನಪಟ್ಟಣದಲ್ಲಿ (Channapatna) ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ನಿಂದ ಸಿಪಿ ಯೋಗೇಶ್ವರ್ ಅಖಾಡದಲ್ಲಿದ್ದಾರೆ. ಈ ಕ್ಷೇತ್ರ ಹೆಚ್ಚು ಪ್ರತಿಷ್ಠೆಯಿಂದ ಕೂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಆರೋಪ- ಪ್ರತ್ಯಾರೋಪಗಳು ತುಸು ಹೆಚ್ಚಾಗಿಯೇ ಇದ್ದವು. ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಮತ್ತು ಯಾಸೀರ್ ಪಠಾಣ್ ಕಣದಲ್ಲಿದ್ದಾರೆ.
ಸಂಡೂರಿನಲ್ಲಿ (Sanduru) ಕಾಂಗ್ರೆಸ್ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯಿಂದ ಬಂಗಾರು ಹನಮಂತ ಕಣದಲ್ಲಿದ್ದಾರೆ. ಮೂರು ಕ್ಷೇತ್ರಗಳ ಫಲಿತಾಂಶ ನ.23 ರಂದು ಪ್ರಕಟವಾಗಲಿದೆ.