ನವಗ್ರಹಗಳು ನಮ್ಮ ದೇಹದಲ್ಲಿ ಹಾಗು ನಿತ್ಯದ ಜೀವನದಲ್ಲಿ ಸದಾ ಸಂಚರಿಸುತ್ತ; ಅವುಗಳ ಗೋಚರದಲ್ಲಿ ನಾವಿರುತ್ತೇವೆ.ಕೆಲವು ಕೆಟ್ಟ ಅಭ್ಯಾಸಗಳಿಂದ ನಾವು ನವಗ್ರಹಗಳ ಅವಕೃಪೆಗೆ ಕಾರಣರಾಗುತ್ತೇವೆ.ಅವುಗಳಿಗೆ ಪರಿಹಾರವೆಂದರೆ:–
೧. ನಮ್ಮ ಮನೆಗಳಿಗೆ ಯಾರಾದರೂ ಅತಿಥಿಗಳು-ಅಭ್ಯಾಗತರು ಬಂದಾಗ, ಅವರು ಅತಿಥಿಗಳಿರಲಿ ಅಥವಾ ಕೆಲಸದ ನೌಕರರು/ಆಳುಗಳಿರಲಿ ಅವರಿಗೆ ಕುಡಿಯಲು ಲೋಟದಲ್ಲಿ ಶುದ್ದ ನೀರನ್ನು/ಹಾಲನ್ನು ಕೊಡಬೇಕು.
ಹೀಗೆ ಶುದ್ದ ನೀರನ್ನು ಕುಡಿಯಲು ಕೊಟ್ಟರೆ ರಾಹುಗ್ರಹದಿಂದ ಯಾವುದೇ ದುಷ್ಪರಿಣಾಮಗಳು ಆಗುವುದಿಲ್ಲ. ಜೀವನದಲ್ಲಿ ಯಾವುದೇ ತೊಂದರೆಗಳು/ಅಘಾತಕರ ಘಟನೆಗಳು ಸಂಭವಿಸುವುದಿಲ್ಲ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
೨. ನಿಮಗೆ ಎಲ್ಲಂದರೆ ಅಲ್ಲಿ ಉಗುಳುವ ಅಭ್ಯಾಸವಿದ್ದರೆ, ನಿಮಗೆ ಅಕಸ್ಮಾತ್ ಹೆಸರು ಮತ್ತು ಗೌರವ ಬಂದಲ್ಲಿ, ಅದು ಬಹಳ ದಿನ ಇರಲಾರದು. ಎಲ್ಲಂದರೆ ಅಲ್ಲಿ ಉಗುಳಿದರೆ ಬುಧಗ್ರಹದ ಅವಕೃಪೆ.
ಉಗುಳುವುದನ್ನು ಕೈ ತೊಳೆಯುವ ಬಚ್ಚಲಿನಲ್ಲಿ(wash basin) ಮಾತ್ರ ಉಗಳಬೇಕು. ಆಗ ಮಾತ್ರ ನಿಮ್ಮ ಹೆಸರು ಮತ್ತು ಗೌರವ ವೃಧ್ಧಿಯಾಗುತ್ತವೆ.
೩. ಕೆಲವರಿಗೆ ತಿಂಡಿ, ತಿನಿಸು, ಊಟ ಮಾಡಿದ ತಟ್ಟೆಗಳನ್ನು /ಪಾತ್ರೆಗಳನ್ನು ಹಾಗೆ ಇಡುವ ಅಭ್ಯಾಸ ಇರುತ್ತದೆ. ಅಂತಹವರಿಗೆ ಜೀವನದಲ್ಲಿ ಗೆಲವು ಖಾಯಂ ಆಗಿ ಸಿಗುವುದಿಲ್ಲ. ಅಂಥಹವರು ನಿರಂತರ ಹೋರಾಟ ಮಾಡುತ್ತಿರಬೇಕು ಹಾಗೂ ಆದರೂ ಅವರಿಗೆ ಒಳ್ಳೆಯ ಹೆಸರು ಸಿಗುವುದಿಲ್ಲ.
ನೀವು ಉಪಯೋಗಿಸಿದ ತಟ್ಟೆ/ಲೋಟ/ಪಾತ್ರೆಗಳನ್ನು (ಸಾಧ್ಯವಾದಷ್ಟು) ಬೇಗ ತೊಳೆದು ಅವುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.
ಹೀಗೆ ಮಾಡುವುದರಿಂದ ಚಂದ್ರ ಮತ್ತು ಶನಿ ಗ್ರಹಗಳನ್ನು ಗೌರವಿಸಿದಂತಾಗಿ ಅವರುಗಳು ಸಂತೃಪ್ತರಾಗುತ್ತಾರೆ.
ಇದರಿಂದ ನಿಮಗೆ ಮನಃಶಾಂತಿ ಸಿಗುತ್ತದೆ ಹಾಗೂ ಕೆಲಸದಲ್ಲಿ ಯಾವುದೇ ಅಡೆ-ತಡೆಗಳಿರುವುದಿಲ್ಲ.
೪. ನಮ್ಮ ಮನೆಗಳಲ್ಲಿ ಇರುವ ಗಿಡಗಳು ನಮ್ಮ ಕುಟುಂಬದ ಸದಸ್ಯರಿದ್ದಂತೆ.
ಅವುಗಳಿಗೆ ನಮ್ಮ ಪ್ರೀತಿ ಮತ್ತು ಆರೈಕೆ ಅವಶ್ಯವಿದೆ.
ನಿತ್ಯ ಮುಂಜಾನೆ ಮತ್ತು ಸಂಜೆ ಅವುಗಳಿಗೆ ನೀರು ಉಣಿಸಿದ್ದಲ್ಲಿ, ಗುರು, ಚಂದ್ರ ಮತ್ತು ಸೂರ್ಯ ಗ್ರಹಗಳನ್ನು ಆರಾಧಿಸಿ ಅವುಗಳ ಅನುಗ್ರಹ ಪಡೆದಂತೆ ಆಗುತ್ತದೆ.
ಇದರಿಂದ ನಮಗೆ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಅವುಗಳನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿ ಬರುತ್ದದೆ.
ದಿನ ನಿತ್ಯ ಮರಗಿಡಗಳಿಗೆ ನೀರು ಉಣಿಸುವವರಿಗೆ ಮಾನಸಿಕ ಸಮಸ್ಯೆ/ಖಿನ್ನತೆ, ಮಾನಸಿಕ ಒತ್ತಡಗಳು ಎಂದೆಂದಿಗೂ ಆಗುವುದಿಲ್ಲ..!.
೫. ಯಾರು ತಮ್ಮ ಪಾದರಕ್ಷೆ /ಚಪ್ಪಲಿ, ಕಾಲ ಕವಚ (shoes), ಕೈ ಕವಚಗಳು ಮತ್ತು ಕಾಲು ಚೀಲಗಳನ್ನು ಮನೆಗೆ ಬಂದಾಗ ಎಲ್ಲೆಂದರೆ ಅಲ್ಲಿ ಬಿಟ್ಟಿರುತ್ತಾರೆಯೋ/ಎಸೆದಿರುತ್ತಾರೆಯೋ ಅವರಿಗೆ ಅವರ ಶತ್ರುಗಳು ಹೆಚ್ಚಿನ ತೊಂದರೆ ಕೊಡುತ್ತಾರೆ. ಅವುಗಳನ್ನು ಮನೆಗೆ ಬಂದಾಗ ಸರಿಯಾದ ಜಾಗದಲ್ಲಿ ವ್ಯವಸ್ಥಿತವಾಗಿ ಇಟ್ಟಲ್ಲಿ ಗುರುವು ಪ್ರಸನ್ನನಾಗಿ ಶತ್ರುಗಳು ದೂರವಾಗಿ ಸಮಾಜದಲ್ಲಿ ನಿಮ್ಮ ಘನತೆ ಗೌರವಗಳು ಹೆಚ್ಚಾಗುತ್ತವೆ.
೬. ಹಾಸಿಗೆಯಿಂದ ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆ ಸ್ವಚ್ಚವಾಗಿ ಇಟ್ಟು ಕೊಳ್ಳ ಬೇಕು, ಹಾಗೆ ಇಡದೇ, ನೀವು ಎದ್ದ ನಂತರ ಹಾಸಿಗೆಯ ಹೊದಿಕೆ, ನಿಮ್ಮ ಹೊದಿಕೆ, ತಲೆದಿಂಬುಗಳು ಅಸ್ತವ್ಯಸ್ತವಾಗಿದ್ದರೆ ನಿಮ್ಮನ್ನು ಶನಿ ಮತ್ತು ರಾಹುಗಳು ಕಾಡುತ್ತವೆ. ನೀವು ನಿತ್ಯ ಧರಿಸುವ ಬಟ್ಟೆಗಳು ಸ್ವಚ್ಚ ಇಲ್ಲದಿದ್ದರೆ ನಿಮ್ಮ ನಿತ್ಯದ ಕೆಲಸ ಕಾರ್ಯಗಳು ಎಂದೆಂದಿಗೂ ಸುಗಮವಾಗಿ ನಡೆನಯುವುದಿಲ್ಲ..!
ನೀವೂ ಮತ್ತು ನಿಮ್ಮ ಸುತ್ತಲಿನವರೂ ಸಂತೋಷವಾಗಿರುವುದಿಲ್ಲ.
ಇದನ್ನು ತಡೆಯಲು ನೀವು ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆಯನ್ನು ಸ್ವಚ್ಚವಾಗಿ ಇಟ್ಟುಕೊಂಡರೆ ನಿಮ್ಮ ದೈನಂದಿನ ಕೆಲಸಗಳು ಸುಗಮವಾಗಿ ನಡೆಯುತ್ತವೆ.
೭. ನಾವು ಯಾವಾಗಲೂ ನಮ್ಮ ಕಾಲುಗಳನ್ನು ಹಾಗೂ ಪಾದಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಸತ್ಯ ಸಂಗತಿಯೆಂದರೆ ನಾವುಗಳು ಯಾರೂ ಇದರ ಬಗ್ಗೆ ಗಮನ ಹರಿಸುವುದಿಲ್ಲ. ಕೈ ಕಾಲುಗಳನ್ನು ಮತ್ತು ಪಾದಗಳನ್ನು ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು. ಮನೆಗೆ ಹೊರಗಿನಿಂದ ಬಂದಾಗ ಮುಖ, ಕೈ ಕಾಲುಗಳನ್ನು ಸ್ವಚ್ಚವಾಗಿ ತೊಳೆದುಕೊಳ್ಳಬೇಕು. ( ಸಾಧ್ಯವಾದರೆ ತೊಳೆದುಕೊಂಡೆ ಮನೆಯ ಒಳಗೆ ಪ್ರವೇಶಿಸಿದರೆ ಉತ್ತಮ )
ಇದರಿಂದ ನಿಮಗೆ ಮನಃಶಾಂತಿ ಹಾಗೂ ನೆಮ್ಮದಿ ದೊರೆಯುತ್ತದೆ ಹಾಗೂ ಅನವಶ್ಯಕ ಸಿಟ್ಟು ಹಾಗೂ ಮನಸ್ಸಿಗೆ ಕಿರಿ-ಕಿರಿ ಆಗುವುದಿಲ್ಲ ಹಾಗೂ ದಿನಃ ಪೂರ್ತಿ ಸಂತೋಷವಾಗಿರುತ್ತೀರ.
ಇನ್ನಾದರೂ ಈ ಬಗ್ಗೆ ವ್ಯವಸ್ಥೆ ಮಾಡಿಕೊಂಡು, ಅದನ್ನು ಪಾಲಿಸಿ ಜೀವನದಲ್ಲಿ ಆಗುವ ಆಧ್ಬುತ ಬದಲಾವಣೆಗಳನ್ನು ಗಮನಿಸಿರಿ..!
೮. ನೀವು ಪ್ರತಿದಿನ ಮನೆಗೆ ಬರುವಾಗ ಮನೆಯಲ್ಲಿ ಉಪಯೋಗಿಸುವ ಯಾವುದಾದರೂ ವಸ್ತುವನ್ನು ಹೂವು/ಹಣ್ಣು/ತರಕಾರಿ ಕೈಯಲ್ಲಿ ಹಿಡಿದು ಮನೆಗೆ ತರಬೇಕು.
ಹಾಗೆ ಮಾಡಿದರೆ ಅಂತಹ ಮನೆಯಲ್ಲಿ, ಮನೆಯ ಲಕ್ಷ್ಮಿಯು (ಸಂಪತ್ತಿನ ಅಧಿಪತಿ) ಮತ್ತು ಶುಕ್ರನು ಮನೆಯಲ್ಲಿ ಖಾಯಂ ಆಗಿ ನೆಲಸುತ್ತಾರೆ.
೯. ನೀವು ಉಪಹಾರ/ಊಟ ಮಾಡಿದ ತಟ್ಟೆಯಲ್ಲಿ ಯಾವತ್ತೂ ಆಹಾರವನ್ನು ಉಳಿಸಬೇಡಿರಿ.
ಹಾಗೆ ಉಳಿಸಿದರೆ ನವಗ್ರಹಗಳೆಲ್ಲವೂ ನಿಮಗೆ ವಿರೋಧವಾಗಿ ನೀವು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.
ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564