ಹೈಕಮಾಂಡ್ ಒಪ್ಪಿದ್ರೆ ರಾಜ್ಯ ರಾಜಕಾರಣಕ್ಕೆ ಪ್ರವೇಶ : ಬಿ.ವೈ.ರಾಘವೇಂದ್ರ
ಕಾರವಾರ : ಪಕ್ಷದ ಹೈಕಮಾಂಡ್ ಒಪ್ಪಿದ್ರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಯಡಿಯೂರಪ್ಪ ಹಾಗೂ ನಮ್ಮನ್ನು ಬೆಳೆಸಿದೆ. ಪಕ್ಷ ನಮಗೆ ತಾಯಿ ಇದ್ದಂತೆ.
ವರಿಷ್ಠರು ಬಯಸಿದ್ರೆ ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ.
ಇದೇ ವೇಳೆ ಪಕ್ಷ ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ.
ಸಂಘಟನೆ ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ಪಕ್ಷ ಕಟ್ಟಲು ರಾಜ್ಯಾದ್ಯಂತ ಪ್ರವಾಸ ಮಾಡುತಿದ್ದಾರೆ.
ಅವರ ನೇತೃತ್ವದಲ್ಲೇ ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.









