ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬಳ್ಳಾರಿ ಪಾದಯಾತ್ರೆ ಮುಗಿಯುವಷ್ಟರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಇಬ್ಬರೂ ಬದಲಾಗುತ್ತಾರೆ: ಸಚಿವ ಪ್ರಿಯಾಂಕ್ ಖರ್ಗೆ ಭವಿಷ್ಯ

By the time the Bellary Padayatra ends, both the BJP state president and the Leader of Opposition will change: Minister Priyank Kharge predicts

Shwetha by Shwetha
January 16, 2026
in ರಾಜ್ಯ, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬಳ್ಳಾರಿ ಸಮಾವೇಶ ಮತ್ತು ಪಾದಯಾತ್ರೆ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಬರುವಷ್ಟರಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಬದಲಾಗುವ ಸಾಧ್ಯತೆಗಳೇ ಹೆಚ್ಚಾಗಿವೆ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದ ನುಸುಳುಕೋರರ ವಿಚಾರ, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಬಿಜೆಪಿ ನಾಯಕರ ನಡವಳಿಕೆಗಳ ಬಗ್ಗೆ ಹರಿಹಾಯ್ದರು.

Related posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

March 13, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

ಗಡಿ ಕಾಯುವುದು ಅಮಿತ್ ಶಾ ಕೆಲಸವೋ ಅಥವಾ ಪರಮೇಶ್ವರ್ ಅವರದ್ದೋ?

ಬಾಂಗ್ಲಾದೇಶದ ಪ್ರಜೆಗಳು ಕರ್ನಾಟಕಕ್ಕೆ ಅಕ್ರಮವಾಗಿ ನುಸುಳುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ದೇಶದ ಗಡಿ ಕಾಯುವುದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜವಾಬ್ದಾರಿಯೋ ಅಥವಾ ರಾಜ್ಯದ ಗೃಹ ಸಚಿವ ಪರಮೇಶ್ವರ್ ಅವರ ಕೆಲಸವೋ ಎಂದು ಪ್ರಶ್ನಿಸಿದರು. ಬಾಂಗ್ಲಾದೇಶದವರು ಕರ್ನಾಟಕಕ್ಕೆ ಬರಬೇಕೆಂದರೆ ಮಧ್ಯದಲ್ಲಿರುವ ಬಿಜೆಪಿ ಆಡಳಿತವಿರುವ ರಾಜ್ಯಗಳನ್ನು ದಾಟಿಕೊಂಡೇ ಬರಬೇಕು. ಹಾಗಾದರೆ ಆ ರಾಜ್ಯಗಳಲ್ಲಿ ಭದ್ರತೆ ಇಲ್ಲವೇ? ಗಡಿಯಲ್ಲಿ ಬಿಎಸ್‌ಎಫ್ ಏನು ಮಾಡುತ್ತಿದೆ? ಅಮಿತ್ ಶಾ ಅವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕೇವಲ ಒಂದೂವರೆ ಸಾವಿರ ರೂಪಾಯಿ ಕೊಟ್ಟರೆ ಬಾಂಗ್ಲಾದೇಶದವರಿಗೂ ಆಧಾರ್ ಕಾರ್ಡ್ ಸಿಗುತ್ತಿದೆ ಎಂಬ ಗಂಭೀರ ಆರೋಪವಿದೆ. ಮಹದೇವಪುರದಲ್ಲಿ ಬಿಜೆಪಿ ಮಾಜಿ ಶಾಸಕರು ಜನಜಾಗೃತಿ ಅಭಿಯಾನ ಮಾಡಿದ್ದರು. ಆದರೆ ನ್ಯಾಷನಲ್ ಚಾನೆಲ್ ಒಂದರಲ್ಲಿ ವರದಿಯಾದಂತೆ, ಬಾಂಗ್ಲಾದೇಶದವರು ಆಧಾರ್ ಕಾರ್ಡ್ ಪಡೆದು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ವಿಚಾರದ ಬಗ್ಗೆ ಬಿಜೆಪಿ ನಾಯಕರು ಮೊದಲು ಉತ್ತರ ನೀಡಲಿ ಎಂದು ಸವಾಲು ಹಾಕಿದರು.

ಪಾದಯಾತ್ರೆ ಮಾಡುವ ತಾಕತ್ತು ಬಿಜೆಪಿಗಿಲ್ಲ

ಬಿಜೆಪಿಯ ಬಳ್ಳಾರಿ ಸಮಾವೇಶದ ಬಗ್ಗೆ ಲೇವಡಿ ಮಾಡಿದ ಖರ್ಗೆ, ಅವರಿಗೆ ಪಾದಯಾತ್ರೆ ಮಾಡಲು ಏಕೆ ಹಿಂದೇಟು? ಯಾರ ನಾಯಕತ್ವದಲ್ಲಿ ಮಾಡಬೇಕು ಎಂಬ ಗೊಂದಲವೇ ಇದಕ್ಕೆ ಕಾರಣವಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಜನರ ಪರವಾಗಿ ಪಾದಯಾತ್ರೆ ಮಾಡಿತ್ತು, ವೈಯಕ್ತಿಕ ಲಾಭಕ್ಕಲ್ಲ. ಬಳ್ಳಾರಿಯಿಂದ ಬೆಂಗಳೂರಿಗೆ ನಡೆದು ಬರುವ ಸಾಮರ್ಥ್ಯ ಬಿಜೆಪಿಗಿಲ್ಲವೇ? ಅಥವಾ ಬಹಿರಂಗವಾಗಿ ಬಳ್ಳಾರಿ ನಾಯಕರಿಗೆ ಬೆಂಬಲ ನೀಡಬಾರದು ಎಂದು ಹೈಕಮಾಂಡ್ ತೀರ್ಮಾನಿಸಿದೆಯೇ ಎಂದು ಚಾಟಿ ಬೀಸಿದರು.

ಎಲ್ಲರ ಮೇಲೂ ಕೇಸ್ ಇದೆ, ಬೇಲ್ ಮೇಲೆ ಹೊರಗಡೆ ಇದ್ದಾರೆ. ಇದನ್ನು ಹೇಗೆ ಸಮರ್ಥಿಸಿಕೊಳ್ಳುವುದು ಎಂಬ ಭಯ ಅವರಿಗಿದೆ. ವಿರೋಧ ಪಕ್ಷದ ಸಾಮರ್ಥ್ಯವನ್ನು ನಾವು ಸದನದಲ್ಲೇ ನೋಡಿದ್ದೇವೆ. ಯಾವುದೇ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ತಾಳ್ಮೆ ಅವರಿಗಿಲ್ಲ. ಒಂದು ವೇಳೆ ಅವರು ಪಾದಯಾತ್ರೆ ಆರಂಭಿಸಿದರೂ, ಅದು ಮುಗಿಯುವಷ್ಟರಲ್ಲಿ ಅವರ ರಾಜ್ಯಾಧ್ಯಕ್ಷರು ಮತ್ತು ವಿಪಕ್ಷ ನಾಯಕರು ಬದಲಾಗುವುದು ಖಚಿತ. ಹೀಗಾಗಿ ಅವರು ಪಾದಯಾತ್ರೆ ಮಾಡುವುದು ಅನುಮಾನ ಎಂದು ಭವಿಷ್ಯ ನುಡಿದರು.

ಕೇಂದ್ರದೊಂದಿಗೆ ಸಂಘರ್ಷ ಬೇಡ ಎಂಬ ಸಲಹೆಗೆ ಪ್ರತಿಕ್ರಿಯಿಸಿದ ಅವರು, ಸಂಘರ್ಷ ಮಾಡುತ್ತಿರುವುದು ನಾವಲ್ಲ, ಕೇಂದ್ರ ಸರ್ಕಾರ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ನಮ್ಮ ರಾಜ್ಯದಿಂದ ಶೇ. 40ರಷ್ಟು ಹಣ ತೆರಿಗೆ ರೂಪದಲ್ಲಿ ಹೋಗುವಾಗ, ರಾಜ್ಯಗಳ ಜೊತೆ ಕನಿಷ್ಠ ಸಮಾಲೋಚನೆ ನಡೆಸುವ ಸೌಜನ್ಯವೂ ಕೇಂದ್ರಕ್ಕಿಲ್ಲವೇ? ಸಂವಿಧಾನದ ವಿಧಿ 21, 258 ಮತ್ತು 280ರ ನೇರ ಉಲ್ಲಂಘನೆಯಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ಬೇಡವೇ? ಇದು ಕೇಂದ್ರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಯಿಯೆಂದವರಿಂದ ಸಂಸ್ಕೃತಿ ಕಲಿಯಬೇಕಿಲ್ಲ

ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಆರೋಪಕ್ಕೆ ಕಿಡಿಕಾರಿದ ಪ್ರಿಯಾಂಕ್ ಖರ್ಗೆ, ನಾವು ಬಿಜೆಪಿಗರಿಂದ ಸಂಸ್ಕೃತಿ ಕಲಿಯಬೇಕಿಲ್ಲ. ಮುನಿರತ್ನ, ಸಿ.ಟಿ ರವಿ ಅವರು ಕೌನ್ಸಿಲ್ ನಲ್ಲಿ ಏನು ಮಾತನಾಡಿದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ. ಸ್ವತಃ ವಿರೋಧ ಪಕ್ಷದ ಮೇಲ್ಮನೆ ನಾಯಕರು ಚಿತ್ತಾಪುರದಲ್ಲಿ ನನಗೆ ನಾಯಿ ಎಂದು ಕರೆದಿದ್ದಾರೆ. ಇಂಥವರಿಂದ ನಾವು ಪಾಠ ಕಲಿಯಬೇಕಾ ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.

ShareTweetSendShare
Join us on:

Related Posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

by Shwetha
March 13, 2026
0

ಕೇಂದ್ರ ಸರ್ಕಾರ ಅಡುಗೆ ಅನಿಲ (LPG) ಸಿಲಿಂಡರ್ ಬುಕ್ಕಿಂಗ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ. ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಗಡುವನ್ನು 25 ದಿನಗಳಿಂದ 45 ದಿನಗಳಿಗೆ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

by Shwetha
March 13, 2026
0

ಕರ್ನಾಟಕದಲ್ಲಿ ಡೆಂಗ್ಯೂ ಮಾದರಿಯ ಲಕ್ಷಣಗಳನ್ನು ಉಂಟುಮಾಡುವ ಲೆಪ್ಟೋಸ್ಪೈರೋಸಿಸ್ ಸೋಂಕಿನ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಕಂಡುಬಂದಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

by Shwetha
March 13, 2026
0

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram