ರಾಜ್ಯದ ಜನರು ಈ ಬಾರಿ ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯುಗಾದಿಗೂ ಮುನ್ನ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ.
ಏ. 6 ಹಾಗೂ ಏ. 7ರಂದು ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಕರಾವಳಿ, ಕರ್ನಾಟಕದ ದಕ್ಷಿಣದ ಅಂಜಿನಲ್ಲಿರುವ ಕೆಲವು ಪ್ರದೇಶಗಳು, ಪೂರ್ವಕ್ಕಿರುವ ಜಿಲ್ಲೆಗಳು, ಮಧ್ಯಭಾಗದಲ್ಲಿ ಹಾಗೂ ಉತ್ತರ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ಎಂದು ಹೇಳಿದೆ.
ಈ ವಾರಾಂತ್ಯಕ್ಕೆ ರಾಜ್ಯಾದ್ಯಂತ ಹಲವು ಕಡೆ ಹಗುರವಾದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ತಿಳಿಸಿದೆ. ಏ.6ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಏ.7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.