ಆಶ್ರಮದ ಮಕ್ಕಳ ಜೊತೆ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ
ಉಳ್ಳಾಲ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಮಕ್ಕಳ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.
ಇಂದು ಬೆಳಿಗ್ಗೆ 8.30ರ ಸಮಯಕ್ಕೆ ಕುತ್ತಾರು ಬಾಲಸಂರಕ್ಷಣಾ ಕೇಂದ್ರಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ಉಳ್ಳಾಲ ಬಿಜೆಪಿ ಕಾರ್ಯಕರ್ತರು ಬರಮಾಡಿಕೊಂಡರು.
ಮೊದಲಿಗೆ ಗೋಪೂಜೆ ನೆರವೇರಿಸಿದ ವಿಜಯೇಂದ್ರ ನಂತರ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ ಆಶ್ರಮದ ಮಕ್ಕಳ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನೆಡ್ಡಾ ಅವರ ಸೂಚನೆಯಂತೆ ಮೈಸೂರಿನಿಂದ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಇದನ್ನೂ ಓದಿ : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಕೆ.ಜೆ ಜಾರ್ಜ್, ಇಬ್ಬರು ಅಧಿಕಾರಿಗಳಿಗೆ ಹೈಕೋರ್ಟ್ ರಿಲೀಫ್
ಯಡಿಯೂರಪ್ಪ ಅವರ ಮಗನಾಗಿರುವುದಕ್ಕೆ ಹೆಮ್ಮೆ ಇದೆ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಪ್ರೀತಿ ವಿಶ್ವಾಸದೊಂದಿಗೆ ಬೆಳೆಯುತ್ತಾ ಇದ್ದೇವೆ ಎಂದರು.
ಇದೇ ವೇಳೆ ಶಿರಾ ಉಪಚುನಾವಣೆ ಬಗ್ಗೆ ಮಾತನಾಡಿ, ಶಿರಾ ಕ್ಷೇತ್ರದಲ್ಲಿ 25,000 ಮತಗಳ ಅಂತರದಲ್ಲಿ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ `ಕಾಂಗ್ರೆಸ್ ಮುಕ್ತ’ವಾಗಲಿದೆ : ಸಿ.ಟಿ.ರವಿ
ಇನ್ನು ಈ ಸಂದರ್ಭದಲ್ಲಿ ಆಶ್ರಮ ಸಂಘಟಕ ಅನಂತಕೃಷ್ಣ ಭಟ್, ಬಿಜೆಪಿ ಮುಖಂಡರುಗಳಾದ ಕಿಶೋರ್ ಕುಮಾರ್ ಪುತ್ತೂರು, ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್, ಗೋಪಾಲ್ ಕುತ್ತಾರ್, ರಾಜೀವ್ ಮೈಸೂರು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










