ಮದ್ದೂರು ಕಲ್ಲು ಎಸೆತ ಪ್ರಕರಣ ದಿನೇದಿನೇ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದ್ದರೆ, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಮದ್ದೂರಿನಲ್ಲಿ ಮಾತನಾಡಿದ ವಿಜಯೇಂದ್ರ,
ಮುಖ್ಯಮಂತ್ರಿಗಳ ಹೇಳಿಕೆ, ಭದ್ರಾವತಿ ಶಾಸಕರ ಹೇಳಿಕೆ—ಇವೆಲ್ಲವುಗಳ ಮೂಲಕ ರಾಜ್ಯ ಸರ್ಕಾರವೇ ಬೆಂಕಿಗೆ ತುಪ್ಪ ಸುರಿಯುತ್ತಿರುವಂತಾಗಿದೆ. ಮದ್ದೂರು ಕೇಸ್‌ನಲ್ಲಿ ಪೊಲೀಸ್ ವೈಫಲ್ಯ ಸೇರಿದಂತೆ ನಿಜವಾದ ಕಾರಣಗಳು ಬಹಿರಂಗವಾಗಬೇಕು ಎಂದು ಒತ್ತಾಯಿಸಿದರು.
ಈ ಪ್ರಕರಣದ ಬಗ್ಗೆ ನಮ್ಮ ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡುತ್ತೇವೆ. ಜೊತೆಗೆ ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರಿಗೆ ಧೈರ್ಯ ತುಂಬುತ್ತೇವೆ. ಸರ್ಕಾರದ ನಿರ್ಲಕ್ಷ್ಯವನ್ನು ನಾವು ಬಯಲು ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಮದ್ದೂರು ಘಟನೆ ಕುರಿತು ಈಗ ನ್ಯಾಯಾಂಗ ತನಿಖೆ ನಡೆಸಬೇಕೆಂಬ ಬೇಡಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.








