ಬಸವಕಲ್ಯಾಣದತ್ತ ಸಿಎಂ ಪುತ್ರ ಬಿ.ವೈ.ವಿಜಯೇಂದ್ರರ ಚಿತ್ತ
ಕಲಬುರಗಿ : ಶಿರಾದಲ್ಲಿ ಕಮಲ ಬಾವುಟವನ್ನು ಹಾರಿಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಇದೀಗ ಬಸವಕಲ್ಯಾಣದತ್ತ ಗಮನ ಹರಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಮಸ್ಕಿ, ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಹೀಗಾಗಿ ಬಸವಕಲ್ಯಾಣದಲ್ಲಿ ಬಿಜೆಪಿ ಮುಖಂಡರನ್ನು ವಿಜಯೇಂದ್ರ ಭೇಟಿ ಆಗಲಿದ್ದಾರೆ.
ಕಲಬುರಗಿ ಮೂಲಕ ಬಸವಕಲ್ಯಾಣ ಕಡೆ ಹೊರಟ ವಿಜಯೇಂದ್ರ, ಕಲಬುರಗಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಉಪಾಧ್ಯಕ್ಷನಾದ ಬಳಿಕ ಮೊದಲ ಬಾರಿಗೆ ಕಲಬುರಗಿಗೆ ಬಂದಿದ್ದೇನೆ.
ಈ ಹಿಂದೆ 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿತ್ತು. 15 ರಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಅಲ್ಲದೇ ಮೊನ್ನೆ ನಡೆದ ಚುನಾವಣೆಯಲ್ಲಿ 2 ಕ್ಷೇತಗಳಲ್ಲಿಯೂ ಗೆಲುವು ಸಾಧಿಸಿದ್ದೇವೆ.
ಶಿರಾ ಕ್ಷೇತ್ರ ದೊಡ್ಡ ಸವಾಲಾಗಿದ್ದರೂ ಕೂಡ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಅವರ ಕೆಲಸಗಳೇ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಿವೆ ಎಂದು ಹರ್ಷ ವ್ಯಕ್ತಪಡಿಸಿದರು.
ಹಿರಿಯ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ: ಅಕ್ಷರ ಲೋಕದ `ರವಿ’ ಅಸ್ತಂಗತ..!
ಇನ್ನು ಮುಂಬರುವ ದಿನಗಳಲ್ಲಿ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಹಾಗಾಗಿ ಬಸವಕಲ್ಯಾಣದಲ್ಲಿ ಇಂದು ಮುಖಂಡರನ್ನು ಭೇಟಿಯಾಗಿ ಬೆಂಗಳೂರಿಗೆ ವಾಪಸಾಗುತ್ತೇನೆ.
ಬಿಜೆಪಿ ರಾಜ್ಯಾಧ್ಯಕ್ಷರು ಯಾವುದೇ ಕ್ಷೇತ್ರದ ಜವಾಬ್ದಾರಿ ಕೊಟ್ಟರೂ ಕೂಡ ಅದನ್ನು ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ಬಸವಕಲ್ಯಾಣದಿಂದ ಸ್ಪರ್ಧೆ ಮಾಡುವ ಬಗ್ಗೆ ಮಾತನಾಡಿದ ವಿಜಯೇಂದ್ರ, ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ನಾನಂತೂ ಆಕಾಂಕ್ಷಿಯಲ್ಲ.
ಬಿಜೆಪಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ. ಪಕ್ಷದ ಹೈಕಮಾಂಡ್ ನಿರ್ಣಯಿಸೋ ಅಭ್ಯರ್ಥಿ ಪರ ಕೆಲಸ ಮಾಡಿ ಗೆಲ್ಲಿಸುವ ಎಲ್ಲಾ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಮುಂದುವರಿದು ಕಾಂಗ್ರೆಸ್ ಜೆಡಿಎಸ್ ವಿರುದ್ಧ ಕಿಡಿಕಾರಿದ ವಿಜಯೇಂದ್ರ, ಕಾಂಗ್ರೆಸ್ ಮತ್ತು ಜೆಡಿಎಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡುತ್ತಿವೆ.
ಆದ್ರೆ ಬಿಜೆಪಿ ಎಲ್ಲಾ ಸಮುದಾಯಗಳನ್ನು ಒಂದಾಗಿ ಕಾಣುವ ಕಾರಣ ಉಪಕದನದಲ್ಲಿ ಕಮಲ ಅರಳಿದೆ. ಅದೆಲ್ಲಿಗೇ ಹೋದರೂ ಕೂಡ ಕಮಲ ಅರಳುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel