ಕಾಂಗ್ರೆಸ್ congress ಮೊದಲು 113 ಸ್ಥಾನ ಗೆಲ್ಲಲಿ, ಆಮೇಲೆ ಸಿಎಂ ವಿಚಾರ : ಬೈರತಿ ಬಸವರಾಜ್ ಟಾಂಗ್
ತುಮಕೂರು : ಮೊದಲು ಚುನಾವಣೆಯಲ್ಲಿ 113 ಸ್ಥಾನದಲ್ಲಿ ಗೆಲ್ಲಲಿ. ಆ ನಂತರ ಮುಖ್ಯಮಂತ್ರಿ ಸ್ಥಾನದ ಬಗ್ಗೆ ತೀರ್ಮಾನಿಸಲಿ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಭೈರತಿ ಬಸವರಾಜ್ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರವಾಗಿ ಚರ್ಚೆ ನಡೆಯುತ್ತಿರುವ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಭೈರತಿ ಬಸವರಾಜ್, ಅವರು ಮೊದಲು ಚುನಾವಣೆಯಲ್ಲಿ 113 ಸ್ಥಾನದಲ್ಲಿ ಗೆಲ್ಲಲಿ. ಆ ನಂತರ ಮುಖ್ಯಮಂತ್ರಿ ಸ್ಥಾನದ ಬಗ್ಗೆ ತೀರ್ಮಾನಿಸಲಿ ಎಂದು ಟೀಕಿಸಿದ್ದಾರೆ.
ಇನ್ನು ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಇಲ್ಲ.
ಈಗಾಗಲೇ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ಅಲ್ಲದೇ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಮುಂದಿನ ಚುನಾವಣೆಯನ್ನು ಸಮರ್ಥವಾಗಿ ಎದುರಿಸುತ್ತೇವೆ. ಇದರಲ್ಲಿ ಯಾವದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.