ಕಲ್ಯಾಣ ಕರ್ನಾಟಕಕ್ಕೆ ಒಂದೂವರೆ ಸಾವಿರ ಕೋಟಿ ತೆಗೆದಿಟ್ಟಿದ್ದೇನೆ : ಸಿಎಂ
ರಾಯಚೂರು : ಕಲ್ಯಾಣ ಕರ್ನಾಟಕಕ್ಕೆ ಒಂದೂವರೆ ಸಾವಿರ ಕೋಟಿ ತೆಗೆದಿಟ್ಟಿದ್ದೇನೆ. ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಮಾಡುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮಸ್ಕಿ ಉಪಚುನಾವಣೆ ತುರವಿಹಾಳದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕನಕನಾಲಾ ಯೋಜನೆಯಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ.
ಕಲ್ಯಾಣ ಕರ್ನಾಟಕಕ್ಕೆ ಒಂದೂವರೆ ಸಾವಿರ ಕೋಟಿ ತೆಗೆದಿಟ್ಟಿದ್ದೇನೆ. ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಮಾಡುತ್ತೇನೆ.
ತುಂಗಭದ್ರಾ ಜಲಾಶಯಕ್ಕೆ ನವಲಿ ಬಳಿ ಪರ್ಯಾಯ ಜಲಾಶಯ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದೇವೆ. ಕಾಗಿನೆಲೆ ಅಭಿವೃದ್ಧಿಗೆ 10 ಕೋಟಿ ಕೊಟ್ಟಿದ್ದೇನೆ. ನನಗೆ ಜಾತಿ ಗೊತ್ತಿಲ್ಲ. ಎಲ್ಲರನ್ನೂ ಒಂದೇ ರೀತಿಯಾಗಿ ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಎಸ್ ವೈ, ಕಾಂಗ್ರೆಸ್ಸಿನವರು ಹಣ ಹೆಂಡ ತೋಳ್ ಬಲದಿಂದ ಜಾತಿ ವಿಷಬೀಜ ಬಿತ್ತಿ ಗೆಲ್ಲುವ ಭ್ರಮೆಯಲ್ಲಿದ್ದಾರೆ. ನಮ್ಮ ಅಭ್ಯರ್ಥಿ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲ್ತಾರೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಹೇಳ್ತೀನಿ ಪ್ರತಾಪ್ ಗೌಡ ಗೆಲ್ಲಬೇಕು. 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರೆ ನೀವು ಏನೇ ಕೇಳಿದರೂ ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.










