ಹೈಕಮಾಂಡ್ ಹೇಳಿದ್ರೆ ಸಿಎಂ ರಾಜೀನಾಮೆ | ಇದು ಬಿಜೆಪಿಯ ವಿಶೇಷತೆ ಎಂದ ಕಟೀಲ್
ಮಂಗಳೂರು : ಪಕ್ಷದ ರಾಷ್ಟ್ರನಾಯಕರು ಹೇಳಿದರೆ, ಹೈಕಮಾಂಡ್ ಸೂಚನೆ ನೀಡಿದರೆ ಅದಕ್ಕೆ ಸರಿಯಾಗಿ ನಡೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇದು ಬಿಜೆಪಿಯ ವಿಶೇಷತೆ. ಬಿಜೆಪಿಗರು ಅಧಿಕಾರಕ್ಕೆ ಅಂಟಿ ಕುಳಿತವರಲ್ಲ. ಇದು ಆದರ್ಶ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆಗೆ ಸಿದ್ಧ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ಕಟೀಲ್, ಪಕ್ಷದ ರಾಷ್ಟ್ರನಾಯಕರು ಹೇಳಿದರೆ, ಹೈಕಮಾಂಡ್ ಸೂಚನೆ ನೀಡಿದರೆ ಅದಕ್ಕೆ ಸರಿಯಾಗಿ ನಡೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಇದು ಬಿಜೆಪಿಯ ವಿಶೇಷತೆ. ಬಿಜೆಪಿಗರು ಅಧಿಕಾರಕ್ಕೆ ಅಂಟಿ ಕುಳಿತವರಲ್ಲ. ಇದು ಆದರ್ಶ. ಆದರೆ ಪಕ್ಷದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಗಳಿಲ್ಲ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಯಡಿಯೂರಪ್ಪನವರು ನಮ್ಮ ಸರ್ವ ಸಮ್ಮತಿಯ ನಾಯಕರು ಎಂದು ಹೇಳಿದರು.
ಇನ್ನು ಪಕ್ಷದಲ್ಲಿ, ರಾಷ್ಟ್ರನಾಯಕರಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಗಳಿಲ್ಲ. ಹಾಗಾಗಿ ಈ ಬಗ್ಗೆ ಚರ್ಚೆಗಳು ಅಪ್ರಸ್ತುತ. ಸಿಎಂ ಯಡಿಯೂರಪ್ಪನವರು ಚೆನ್ನಾಗಿ ಕೋವಿಡ್ ನಿರ್ವಹಣೆ ಮಾಡುತ್ತಿದ್ದಾರೆ. ಇನ್ನಷ್ಟು ಮಾಡಬೇಕಾಗಿದ್ದು, ಆ ಕಾರ್ಯದ ಕಡೆಗೆ ಗಮನ ಹರಿಸುತ್ತಿದ್ದಾರೆ ಎಂದರು.