ರಮೇಶ್ ಜಾರಕಿಹೊಳಿ ನಿರಪರಾಧಿಯಾಗಿ ಹೊರಬರ್ತಾರಂತೆ : ಸಿಎಂ ಹೇಳಿದ್ದು…! C M B S yediyurappa
ಬೆಳಗಾವಿ : ಮಾಜಿ ಸಚಿವರ ಸಿಡಿ ಪ್ರಕರಣ ರೋಚಕ ತಿರುವುಗಳನ್ನ ಪಡೆದುಕೊಳ್ಳುತ್ತಾ ಸಾಗಿದೆ.
ಈ ಮಧ್ಯೆ ಇದೇ ಮೊದಲ ಬಾರಿಗೆ ಪ್ರಕರಣದ ಬಗ್ಗೆ ಬಿ.ಎಸ್.ಯಡಿಯೂರಪ್ಪ ಬಹಿರಂಗವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ನಿರಪರಾಧಿಯಾಗಿ ಹೊರಬರುತ್ತಾರೆ ಎಂದು ಹೇಳಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಸಿ.ಡಿ. ಪ್ರಕರಣವನ್ನು ಎಸ್‍ಐಟಿಯು ಸಂಪೂರ್ಣ ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದೆ.
ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ ಕಾಂಗ್ರೆಸ್‍ನವರು ಇದರಲ್ಲಿ ದುರುದ್ದೇಶದ ರಾಜಕೀಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿಧರು.
ಈ ಪ್ರಕರಣದ ಬಗ್ಗೆ ನಿತ್ಯವೂ ಗೃಹ ಸಚಿವರಿಂದ ಮಾಹಿತಿ ಪಡೆಯುತ್ತಿದ್ದೇನೆ.
ಸಿದ್ದರಾಮಯ್ಯ ಜವಾಬ್ದಾರಿ ಸ್ಥಾನದಲ್ಲಿದ್ದು ಅದಕ್ಕೆ ತಕ್ಕಂತೆ ಮಾತನಾಡಬೇಕು ಎಂದು ಸಿದ್ದರಾಮಯ್ಯನವರ ಸಿಡಿ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಹುಳುಕಿದೆ ಎನಿಸುತ್ತಿದೆ ಎಂಬ ಹೇಳಿಕೆ ತಿರುಗೇಟು ನೀಡಿದರು.