ಹುಬ್ಬಳ್ಳಿ: ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಗೆ ಟಿಕೆಟ್ ನೀಡಿದರೆ ಮಾತ್ರ ನಾವು ಗೆಲ್ಲುತ್ತೇವೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಮನಸ್ಸಿನಲ್ಲಿ ಯೋಗೇಶ್ವರ್ ಅಭ್ಯರ್ಥಿ ಆಗಬೇಕು ಎಂಬುವುದಿದೆ. ಹೀಗಾಗಿ ಅವರಿಗೆ ಟಿಕೆಟ್ ನೀಡಬೇಕು. ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿ ಆಗಬೇಕು. ನಮ್ಮೆಲ್ಲರಿಗೂ ಯೋಗೇಶ್ವರ್ ಅವರನ್ನೇ ಅಭ್ಯರ್ಥಿ ಮಾಡಬೇಕು ಎಂಬ ಆಸೆ ಇದೆ. ಅಲ್ಲದೇ, ಒತ್ತಡವನ್ನೂ ಹಾಕುತ್ತಿದ್ದೇವೆ. ಆದರೆ, ಅಂತಿಮವಾಗಿ ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ. ಹಾಗೇ ನೋಡಿದರೆ ಕುಮಾರಸ್ವಾಮಿ ಅವರೇ ಯೋಗಿಶ್ವರ್ ಅವರನ್ನು ಕರೆದು ಟಿಕೇಟ್ ನೀಡಬೇಕು ಎಂದಿದ್ದಾರೆ.
ನಾನು ಶಿಗ್ಗಾಂವಿ ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ (Basavaraj Bommai) ಕುಟುಂಬಕ್ಕೆ ಅವಕಾಶ ಕೊಡಬೇಕು ಎಂಬ ಕೂಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಬೊಮ್ಮಾಯಿ ಬದ್ಧವಾಗಿರಬೇಕು. ಹೈಕಮಾಂಡ್ ಕೂಡಾ ಎಲ್ಲ ಆಯಾಮಗಳಲ್ಲಿ ಸರ್ವೆ ಮಾಡಿದೆ. ಕೋರ್ ಕಮಿಟಿಯಿಂದ ಮೂರ್ನಾಲ್ಕು ಹೆಸರು ಹೋಗಿರುವ ಕುರಿತು ಮಾಹಿತಿ ಇದೆ ಎಂದಿದ್ದಾರೆ.








