ರಾಮನಗರ: ನಾಪತ್ತೆಯಾಗಿರುವ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ (CP Yogeshwar) ಅವರ ಭಾವ ಹಾಗೂ ಉದ್ಯಮಿ ಮಹದೇವಯ್ಯ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಈ ಕುರಿತು ರಾಮನಗರ (Ramanagara) ಎಸ್ಪಿ ಕಾರ್ತಿಕ್ ರೆಡ್ಡಿ, ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಮಹದೇವಯ್ಯ ಪುತ್ರ ಪ್ರಶಾಂತ್ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಒಂದು ಬಾರಿ ಬೇರೆಯವರು ಕರೆ ಸ್ವೀಕರಿಸಿ ಮಾತನಾಡಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಹೇಳಿದ್ದಾರೆ.
ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಇತ್ತೀಚೆಗೆ ನಾಪತ್ತೆಯಾಗಿದ್ದರು. ತೋಟದ ಮನೆಗೆ ಚನ್ನಪಟ್ಟಣ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.