ವಂಶಪಾರಂಪರ್ಯ ಇಲ್ಲ, ಬಿಎಸ್‍ವೈ ಪಕ್ಷದ ಮಾಲೀಕರಲ್ಲ : ಸಿ.ಟಿ.ರವಿ
ಬೆಂಗಳೂರು : ನಮ್ಮಲ್ಲಿ ವಂಶಪಾರಂಪರ್ತ ಆಡಳಿತ ಇಲ್ಲ. ನಮ್ಮ ಪಕ್ಷದ ಡಿಎನ್ ಎನಲ್ಲಿಯೂ ಅದು ಇಲ್ಲ. ಯಡಿಯೂರಪ್ಪ ನಮ್ಮ ಸರ್ವೋಚ್ಛ ನಾಯಕರೇ ಹೊರತು, ಮಾಲೀಕರಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳುವ ಮೂಲಕ ಬಿಎಸ್ ವೈ ಕುಟುಂಬ ವ್ಯಮೋಹದ ಬಗ್ಗೆ ಟೀಕೆ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸರ್ಕಾರದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಉತ್ತರಾಧಿಕಾರಿಗಳ ಸಂಸ್ಕøತಿಯ ಪಕ್ಷವಲ್ಲ, ನಮ್ಮ ಪಕ್ಷಕ್ಕೆ ಯಾರೋ ಒಬ್ಬ ವ್ಯಕ್ತಿ ಮಾಲೀಕ ಅಲ್ಲ, ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಮಾಲೀಕರು. ಕಾಂಗ್ರೆಸ್ ಪಕ್ಷಕ್ಕೆ ನೆಹರೂ ಕುಟುಂಬ, ಡಿಎಂಕೆಗೆ ಕರುಣಾನಿಧಿ, ಸಮಾಜವಾದಿ ಪಕ್ಷಕ್ಕೆ ಮುಲಾಯಂ ಸಿಂಗ್ ಯಾದವ್, ಹೀಗೆ ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಇದೆ. ಆದರೆ, ನಮ್ಮಲ್ಲಿ ಅಂತಹ ಪ್ರವೃತ್ತಿ ಇಲ್ಲ, ಕಾರ್ಯಕರ್ತರೇ ಮಾಲೀಕರು.
ಇನ್ನ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಛ ನಾಯಕರೇ ಹೊರತು, ಮಾಲೀಕರಲ್ಲ.ಯಡಿಯೂರಪ್ಪ ನಾಯಕನಾದರೆ ಕಾರ್ಯಕರ್ತರೇ ಮಾಲೀಕರು. ಓನರ್ ಶಿಪ್ ಬೇರೆ, ನಾಯಕರ ಮಕ್ಕಳು ರಾಜಕೀಯಕ್ಕೆ ಬರುವುದು ಬೇರೆ. ಇತರ ಪಕ್ಷದಲ್ಲಿ ಅಂತಿಮ ನಿರ್ಧಾರ ಯಾವುದೋ ಒಬ್ಬ ನಾಯಕನ ಕುಟುಂಬ ತೆಗೆದುಕೊಳ್ಳುತ್ತದೆ. ಆದರೆ, ನಮ್ಮ ಪಕ್ಷದಲ್ಲಿ ಕೋರ್ ಕಮಿಟಿ, ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
