ಜೈಲಿಗೆ ಹೋಗಿ ಬಂದ್ರೆ ಕಾಂಗ್ರೆಸ್ ನಲ್ಲಿ ಪ್ರಮೋಷನ್ : ಸಿ.ಟಿ.ರವಿ
ಚಿಕ್ಕಮಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಪ್ರಮೋಷನ್ ಸಿಗಬೇಕು ಅಂದರೇ ಭ್ರಷ್ಟಾಚಾರ ಮಾಡಬೇಕು. ಇಲ್ಲಾ ಜೈಲಿಗೆ ಹೋಗಬೇಕು ಎಂದು ಕಾಂಗ್ರೆಸ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ವಿನಯಕ್ ಕುಲಕರ್ಣಿ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರದ ಕಾಂಗ್ರೆಸ್ ನ ರಾಜಕೀಯ ವ್ಯವಸ್ಥೆಯ ಒಂದು ಭಾಗ.
ಅಲ್ಲಿ ಗುಂಡಾಗಿರಿ ಪ್ರಮೋಷನ್ ಗೆ ಇರುವ ಒಂದು ಮಾದರಿ ಎಂದು ವ್ಯಂಗ್ಯವಾಡಿದರು.
ಇನ್ನು ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿ.ಟಿ.ರವಿ, ಡಿಕೆ ಶಿವಕುಮಾರ್ ಅವರು ಬೆಳೆದ ಬಂದ ರೀತಿಯಲ್ಲೇ ಆಲೋಚನೆ ಮಾಡುತ್ತಿದ್ದಾರೆ.
ಹಿಂದೆ ರಾಜೀವ್ ಗಾಂಧಿ ಅವರು ತನ್ನ ಮೇಲೆ ಗೂಂಡಾ ಅಂತ ಬಂದಾಗ ಗೂಂಡಾಗಳಿಗೆ ನಾವು ವಿಶೇಷವಾದ ಆದ್ಯತೆ ಕೊಡಬೇಕೆಂದು ಅವರೇ ಹೇಳಿದ್ದಾರೆ. ಅದನ್ನ ಅವರೇ ಒಪ್ಪಿದ್ದಾರೆ ಎಂದು ಕಾಲೆಳೆದರು.









