ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
ಶನಿವಾರ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಿ.ಟಿ ರವಿ ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ.
ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು ನಿರ್ಧರಿಸಿದ್ದರು.
ಆದರೆ ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿ ಟಿಕೆಟ್ ಸಿಗದಿದ್ದರೇ ಕಾಂಗ್ರೆಸ್ ಗೆ ಮುನಿರತ್ನ : ಡಿಕೆಶಿ ಹೇಳಿದ್ದೇನು?
ಇನ್ನೂ ನಾಳೆ ಸಿ.ಟಿ ರವಿ ದೆಹಲಿಗೆ ಪ್ರಯಾಣ ಬೆಳಸಲಿದ್ದು, ರಾಜೀನಾಮೆ ಬಗ್ಗೆ ಜೆಪಿ ನಡ್ಡಾಗೆ ಮಾಹಿತಿ ತಿಳಿಸಲಿದ್ದಾರೆ.
ಹಾಗೇ ದೆಹಲಿಯಲ್ಲಿ ಅಕ್ಟೋಬರ್ 5, 6ರಂದು ನಡೆಯಲಿರುವ ಪಕ್ಷದ ಸಂಘಟನಾ ಸಭೆಯಲ್ಲಿ ಸಿ.ಟಿ.ರವಿ ಭಾಗವಹಿಸಲಿದ್ದಾರೆ.
ಸಿ.ಟಿ ರವಿ ರಾಜೀನಾಮೆ ಸ್ವೀಕಾರ ಬಗ್ಗೆ ಸೋಮವಾರವೇ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.








