ಐಸಿಸಿ ಏಕದಿನ ವಿಶ್ವಕಪ್-2023 ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ನ್ಯೂಜಿ಼ಲೆಂಡ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿ಼ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ವಿಶ್ವದ ಅತಿದೊಡ್ಡ ಸ್ಟೇಡಿಯಂಗಳಲ್ಲಿ ಒಂದಾಗಿರುವ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈ-ವೋಲ್ಟೇಜ್ ಕದನಕ್ಕೆ ಉಭಯ ತಂಡಗಳು ಸಕಲ ರೀತಿಯಲ್ಲಿ ಸಜ್ಜಾಗಿವೆ. ಉದ್ಘಾಟನಾ ಪಂದ್ಯದಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿರುವ ಎರಡು ತಂಡಗಳಲ್ಲೂ ಗಾಯದ ಸಮಸ್ಯೆ ಕಾಡುತ್ತಿದೆ. ಪ್ರಮುಖವಾಗಿ ನ್ಯೂಜಿ಼ಲೆಂಡ್‌ನ ಕ್ಯಾಪ್ಟನ್ ಕೇನ್ ವಿಲಿಯಂಸನ್ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲಿ ಟಾಮ್ ಲೇಥಂ, ನ್ಯೂಜಿ಼ಲೆಂಡ್ ತಂಡವನ್ನ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ.
ಇವರೊಂದಿಗೆ ನ್ಯೂಜಿ಼ಲೆಂಡ್‌ನ ಮತ್ತೋರ್ವ ಅನುಭವಿ ಆಟಗಾರ ಟಿಮ್ ಸೌಥಿ ಗಾಯದ ಸಮಸ್ಯೆ ಕಾರಣದಿಂದಾಗಿ ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಲಿ ಚಾಂಪಿಯನ್ ಇಂಗ್ಲೆಂಡ್‌ಗೂ ಗಾಯದ ಸಮಸ್ಯೆ ಕಾಡಿದ್ದು, ತಂಡದ ಪ್ರಮುಖ ಆಲ್ರೌಂಡರ್ ಬೆನ್ ಸ್ಟೋಕ್ಸ್ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ. ಉಳಿದಂತೆ ಎರಡು ತಂಡಗಳಲ್ಲಿ ಬಲಿಷ್ಠ ಆಟಗಾರರ ದೊಡ್ಡ ಪಡೆಯೇ ಇದ್ದು, ಮೊದಲ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡೆಸಲು ಸಜ್ಜಾಗಿದ್ದಾರೆ.
ಇಂಗ್ಲೆಂಡ್ ತಂಡ:
ಜಾಸ್ ಬಟ್ಲರ್(ನಾಯಕ), ಜಾನಿ ಬೈರ್ಸ್ಟೋವ್, ಜೋ ರೂಟ್, ಡೇವಿಡ್ ಮಲಾನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಆದಿಲ್ ರಶೀದ್, ಮಾರ್ಕ್ ವುಡ್.
ನ್ಯೂಜಿಲೆಂಡ್ ತಂಡ:
ಡೆವೋನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೆರಿಲ್ ಮಿಚೆಲ್, ಟಾಮ್ ಲೇಥಮ್(ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್.