ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Literary Conference) ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಚಾಲನೆ ನೀಡಿದರು. ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ ಸೇರಿದಂತೆ ಹಲವರು ಇದ್ದರು.
ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ಹಲವರು ಇದ್ದರು.