ಬೆಂಗಳೂರು : ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಕೆದಕಲು ಆರಂಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಮಧುಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಅಂಗೀಕಾರವಾದಾಗಿನಿಂದಲೂ ನಮ್ಮ ದೇಶವನ್ನು ಇಂಡಿಯಾ ಎಂದೇ ಕರೆಯಲಾಗುತ್ತಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ.
ಸಂವಿಧಾನದ ಪೀಠಿಕೆಯಲ್ಲಿ ಕೂಡ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಲಾಗಿದೆ. ಈಗ ಭಾರತ (Bharat) ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು