‘ಸಿಕ್ಕ ಸಿಕ್ಕ ಜಾಗಗಳಲ್ಲಿ ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ನಡೆಸೋಹಾಗಿಲ್ಲ’ : ಸುಪ್ರೀಂ ಕೋರ್ಟ್
ನವದೆಹಲಿ: ಸಿಟಿಜನ್ಶಿಪ್ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಗಳನ್ನು ಕಾನೂನುಬಾಹಿರ ಎಂದು ಹೇಳಿದ್ದ ತನ್ನ ತೀರ್ಪನ್ನು ಬದಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ ಪ್ರತಿಭಟನೆಯ ಹಕ್ಕಿದೆ ಎಂದು ಸಿಕ್ಕ ಸಿಕ್ಕ ಜಾಗಗಳಲ್ಲಿ ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
‘ಯಾರ್ ಸ್ಯಾಮಿ ಕುಟುಂಬ ರಾಜಕಾರಣ ಮಾಡ್ತಿರೋರು..? ಪ್ರಧಾನಿಯಾಗಿ 30 ವರ್ಷವಾಗಿದೆ’..!
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಕೋಮು ಹಿಂಸೆಯಿಂದ ಪಾರಾಗಲು 2015 ಕ್ಕೆ ಮುಂಚೆ ಭಾರತಕ್ಕೆ ಬಂದು ನೆಲೆಸಿದ ಮುಸ್ಲಿಮೇತರರಿಗೆ ಭಾರತೀಯ ನಾಗರೀಕತೆ ನೀಡುವ CAA ಕಾನೂನಿನ ವಿರುದ್ಧ 2019 ರಲ್ಲಿ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯ ಶಾಹೀನ್ ಬಾಗ್ ಈ ಆಯಂಟಿ-ಸಿಎಎ ಪ್ರತಿಭಟನೆಗಳ ಕೇಂದ್ರವಾಗಿ ಹೊರಹೊಮ್ಮಿತ್ತು. ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಾಗಿ ಪಾಲ್ಗೊಂಡಿದ್ದು, ಪ್ರತಿಭಟನಾಕಾರರು ಮೂರು ತಿಂಗಳವರೆಗೆ ಧರಣಿ ಕೂತಿದ್ದರು.
ಚೀನಾಗೆ ಒಂದಿಂಚೂ ಭೂಮಿಯನ್ನ ಬಿಟ್ಟುಕೊಟ್ಟಿಲ್ಲ: ರಕ್ಷಣಾ ಸಚಿವಾಲಯ..!
ಈ ಕಾಯ್ದೆ ವಿರುದ್ಧ 3 ತಿಂಗಳ ಕಾಲ ನಡೆದ ಪ್ರತಿಭಟನೆಯನ್ನು ಅಕ್ಟೋಬರ್ 2020 ರಲ್ಲಿ ಸುಪ್ರೀಂ ಕೋರ್ಟ್ ಕಾನೂನುಬಾಹಿರ ಎಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಪುನರ್ಪರಿಶೀಲಿಸಲು ಕೋರಿ 12 ಚಳುವಳಿಗಾರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಅನಿರುದ್ಧ ಬೋಸ್ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠವು ವಜಾ ಮಾಡಿದೆ.
ಮೈಸೂರು | 50 ಅಂಗಡಿಗಳ ತೆರವು ಕಾರ್ಯಾಚರಣೆ
ಅಲ್ಲದೇ ಪ್ರತಿಭಟಿಸುವ ಮತ್ತು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ಕೆಲವೊಂದು ಕರ್ತವ್ಯಗಳೊಂದಿಗೆ ಬರುತ್ತದೆ. ಪ್ರತಿಭಟನೆಗಳನ್ನು ಅದಕ್ಕಾಗಿ ನಿಗದಿಪಡಿಸಲಾದ ಸ್ಥಳಗಳಲ್ಲಿ ಮಾತ್ರ ಮಾಡತಕ್ಕದ್ದು. ಪ್ರತಿಭಟನೆಯ ಹಕ್ಕನ್ನು ಯಾವುದೇ ಸಮಯದಲ್ಲಿ ಎಲ್ಲಾ ಕಡೆಗಳಲ್ಲೂ ಚಲಾಯಿಸಲಾಗದು. ದಿಢೀರನೆ ಉಂಟಾಗುವ ಪ್ರತಿಭಟನೆಗಳು ಸರಿ, ಆದರೆ ದೀರ್ಘಕಾಲ ನಡೆಸುವ ಪ್ರತಿಭಟನೆಯಲ್ಲಿ ನಿರಂತರವಾಗಿ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡು ಬೇರೆಯವರ ಹಕ್ಕುಗಳಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
Whaaaat…! ಇಲ್ಲಿ ಗರ್ಲ್ ಫ್ರೆಂಡ್ಸ್ ಬಾಡಿಗೆಗೆ ಸಿಗ್ತಾರಾ..! : ಚೀನಾದ INTRESTING FACTS..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








