ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ಕಾಯ್ದೆ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮಸೂದೆ ಜಾರಿಗೆ ಒಪ್ಪಿಗೆ ನೀಡಲಾಗಿದೆ. ಸಂಪುಟದ ಅನುಮೋದನೆ ಸಿಗುತ್ತಿದ್ದಂತೆ ಗೋಹತ್ಯೆ ಕಾಯ್ದೆಯ ಫೈಲ್‍ನ್ನು ರಾಜ್ಯಪಾಲರ ಅಂಕಿತಕ್ಕೆ ಕಳಿಸಲಾಗಿದೆ. ರಾಜ್ಯಪಾಲರ ಅಂಕಿತ ಸಿಗುತ್ತಿದ್ದಂತೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಸೂದೆ ಜಾರಿಗೆ ಬರಲಿದೆ.
ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದ ಗೋಹತ್ಯೆ ಮಸೂದೆಗೆ ವಿಧಾನಪರಿಷತ್‍ನಲ್ಲಿ ಅನುಮೋದನೆ ಸಿಕ್ಕಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಈ ಮುಂಚೆಯೇ ಅಸ್ತಿತ್ವದಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಒಂದಷ್ಟು ಬದಲಾವಣೆ ತರಲಾಗಿದೆ. ಆದರೂ ಕೂಡ ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಅಸ್ತಿತ್ವದಲ್ಲಿದೆ. ಈಗ ಈ ಕಾಯ್ದೆಗೆ ಹೊಸ ರೂಪ ಕೊಡಲಾಗಿದೆ ಅಷ್ಟೇ. ಹಿಂದಿನ ಕಾಯ್ದೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗಿದೆ. ಗಂಡು ಕರುವನ್ನು ಸಾಕಲು ಆಗದವರು ಅದನ್ನು ಗೋಶಾಲೆಗೆ ತಂದು ಬಿಡಬಹುದು. ಅಂಥ ಗೋವುಗಳನ್ನ ಸರ್ಕಾರವೇ ನಿರ್ವಹಣೆ ಮಾಡುತ್ತದೆ. ಗೋಹತ್ಯೆಗೆ ದಂಡವನ್ನು ಹೆಚ್ಚಳ ಮಾಡಲಾಗಿದೆ. ಹಿಂದಿನ ಕಾಯ್ದೆಯಲ್ಲಿ 12 ವರ್ಷದ ಹಸು ಮತ್ತು 13 ವರ್ಷದ ಎಮ್ಮೆಯನ್ನ ವಧಿಸಲು ಅವಕಾಶ ಇತ್ತು. ಹೊಸ ಕಾಯ್ದೆಯಲ್ಲಿ ಅದನ್ನ ತೆಗೆದುಹಾಕಿದ್ದೇವೆ ಎಂದು ತಿಳಿಸಿದರು.
ಗೋಮಾಂಸ ಮಾರಾಟ ನಿಷೇಧ ಇಲ್ಲ
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದರೂ ಗೋಮಾಂಸ ಮಾರಾಟಕ್ಕೆ ನಿಷೇಧ ಇಲ್ಲ ಎಂದು ಕಾನೂನು ಸಚಿವ ಜೆ,ಸಿ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನೂತನ ಕಾಯ್ದೆಯಲ್ಲಿ ಹಸುವಿನ ಮಾಂಸ ಮಾರಾಟಕ್ಕೆ ಮಾತ್ರ ನಿಷೇಧವಿದೆ. ಆದರೆ, ಎಮ್ಮೆ, ಕೋಣನ ಮಾಂಸ ಮಾರಾಟಕ್ಕೆ ನಿಷೇಧ ಇಲ್ಲ. ಇದರಿಂದ ಚರ್ಮೋದ್ಯಮಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.
1964ರ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ 12 ವರ್ಷ ಮೇಲ್ಪಟ್ಟ ಹಸು, ಎತ್ತು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ಹತ್ಯೆ ಮಾಡಲು ಅವಕಾಶ ನೀಡಲಾಗಿತ್ತು. ಆದರರೆ, ಹೊಸ ತಿದ್ದುಪಡಿ ಮಸೂದೆಯಲ್ಲಿ ಹಸು ಮತ್ತು ಎತ್ತುಗಳನ್ನು ಜೀವಿತಾಧಿವರೆಗೆ ವಧೆ ಮಾಡುವಂತಿಲ್ಲ. ಎಮ್ಮೆ ಹಾಗೂ ಕೋಣಗಳನ್ನು 13 ವರ್ಷದ ಬಳಿಕ ವಧೆ ಮಾಡಲು ಅವಖಾಶ ನೀಡಲಾಗಿದೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








